ಹೊಂಡದಲ್ಲಿ ಶವ ಪತ್ತೆ..!

Dead body in pond..!

21-11-2017

ಚಿತ್ರದುರ್ಗ: ಚಿತ್ರದುರ್ಗ ನಗರದ ಸಂತೆ ಹೊಂಡದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಸಂತೆ ಹೊಂಡದಲ್ಲಿ ತೇಲುತ್ತಿದ್ದ ಮೃತದೇಹವನ್ನು ಹೊರ ತೆಗೆದ ಪೊಲೀಸರು, ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಮೃತ ವ್ಯಕ್ತಿ ಬಳ್ಳಾರಿ ಮೂಲದ ದೇವರಾಜ್( 50) ಎಂದು ತಿಳಿದು ಬಂದಿದೆ. ಸ್ಥಳಕ್ಕೆ ‌ನಗರ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಇನ್ನೊಂದಡೆ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಪ್ರತ್ಯೇಕ ಅಪಘಾತದಲ್ಲಿ ಇಬ್ಬರ ಸಾವನ್ನಪ್ಪಿದ್ದಾರೆ. ಪಟ್ಟಣದ ಮಯೂರ ಹೋಟೆಲ್ ಬಳಿ ಹಿಂದಕ್ಕೆ ಲಾರಿ ಚಲಿಸಿ ಅಪರಿಚಿತ ವ್ಯಕ್ತಿ ಮೃತಪಟ್ಟರೆ, ಇನ್ನು ಕಿರಂಗೂರು ಗೇಟ್ ಬಳಿ ನಡೆದ ಅಪಘಾತದಲ್ಲಿ, ದೇವಲಾಪುರ ಮೂಲದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಎರಡೂ ಪ್ರಕರಣಗಳು ಪಟ್ಟಣ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Accident Dead body ಶ್ರೀರಂಗಪಟ್ಟಣ ಪ್ರಕರಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ