ತಣ್ಣಗಾಗದ ಯುವ ಕಾಂಗ್ರೆಸ್ ಪ್ರತಿಭಟನೆ

Congress protest against Ananthakumar Hegde

21-11-2017 218

ಹಾವೇರಿ: ಸಿಎಂ ಸಿದ್ದರಾಮಯ್ಯ ಅವರ ಕುರಿತು ಅವಹೇಳನ ಕಾರಿ ಹೇಳಿಕೆ ಹಿನ್ನೆಲೆ, ಕೇಂದ್ರ ಸಚಿವ ಅನಂತಕುಮಾರ್ ಹೆಗಡೆಯನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ, ಹಾವೇರಿ ನಗರದ ಸಿದ್ದಪ್ಪವೃತ್ತದಲ್ಲಿ ಕಾಂಗ್ರೆಸ್ ಯುವ ಘಟಕ ಪ್ರತಿಭಟನೆ ನಡೆಸಿದೆ. ಅನಂತಕುಮಾರ್ ಹೆಗಡೆ ರಾಜೀನಾಮೆ ಕೊಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ನೂರಾರು ಕಾಂಗ್ರೆಸ್ ಕಾರ್ಯಕರ್ತರಿಂದ ನಗರದ ಪ್ರವಾಸಿಮಂದಿಂದ ಪ್ರಾರಂಭವಾದ ಪ್ರತಿಭಟನೆ, ಹೊಸಮನಿ ಸಿದ್ದಪ್ಪವೃತ್ತದಲ್ಲಿ ರಸ್ತೆ ತಡೆದು, ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದ್ದಲ್ಲದೇ, ಅನಂತಕುಮಾರ್ ಹೆಗಡೆ ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸಂಬಂಧಿತ ಟ್ಯಾಗ್ಗಳು

Anant Kumar Hegde Haveri ಕೇಂದ್ರ ಸಚಿವ ಪ್ರತಿಕೃತಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ