ಸ್ಕೂಟರ್ ನೊಂದಿಗೆ ಅಕ್ರಮ ಮದ್ಯ ವಶ

Illegal liquor seized

21-11-2017

ಕಾರವಾರ: ಅಬಕಾರಿ ಪೊಲೀಸರು ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸ್ಕೂಟರ್ ನಲ್ಲಿ ಸಾಗಿಸುತಿದ್ದ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ರಾಷ್ಟ್ರೀಯ ಹೆದ್ದಾರಿ 66 ರ ಅಂಚೆ ಕಚೇರಿ ಬಳಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ, ಗಜಾ ಬಾನವಾಳಿಕರ್ ನನ್ನು ಅಬಕಾರಿ ಉಪ ಅಧೀಕ್ಷಕ ಎಂ.ವಿ. ಅರೇಗುಳಿ ನೇತ್ರತ್ವದಲ್ಲಿ ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತನಿಂದ 45 ಸಾವಿರ ಮೌಲ್ಯದ ಮದ್ಯ ಹಾಗೂ ವಾಹನ ಜಪ್ತಿ ಮಾಡಲಾಗಿದ್ದು, ಕಾರವಾರ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Karwar illegal liquor ಅಬಕಾರಿ ಕಾರ್ಯಾಚರಣೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ