ಜೈಲಿನೊಳಗೆ ಗಾಂಜಾ: ವ್ಯಕ್ತಿಯೊಬ್ಬನ ಅರೆಸ್ಟ್

central jail: ganja

22-11-2017

ಬೆಂಗಳೂರು: ಜೈಲಿನೊಳಗೆ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪರಪ್ಪನ ಅಗ್ರಹಾರದಲ್ಲಿನ ಕೇಂದ್ರ ಕಾರಾಗೃಹಕ್ಕೆ ಗಾಂಜಾ ಸಾಗಿಸುತ್ತಿದ್ದ ವಾಸು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವಾಸು ನಗರದ ಪುಟ್ಟೇನಹಳ್ಳಿ ನಿವಾಸಿ ಎಂದು ತಿಳಿದು ಬಂದಿದೆ. ಬಂಧಿತನಿಂದ ಸುಮಾರು ಅರ್ಧ ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಜೈಲು ಅಧಿಕಾರಿಗಳು ತಪಾಸಣೆ ಮಾಡುವಾಗ ಗಾಂಜಾ ಪತ್ತೆಯಾಗಿದೆ. ವಾಸುವನ್ನು ವಶಕ್ಕೆ ಪಡೆದಿರುವ ಪರಪ್ಪನ ಅಗ್ರಹಾರ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Central Jail Parappana Agrahara ಗಾಂಜಾ ಅಧಿಕಾರಿಗಳು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ