ಮಧುಸೂದನ್ ಹೇಳಿಕೆ ಖಂಡಿಸಿ ಮೈಸೂರು ಬಂದ್

Go. Madhusudhan demanded arrest

22-11-2017

ಮೈಸೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ, ಬಿಜೆಪಿ ಮುಖಂಡ ಗೋ.ಮಧುಸೂದನ್ ಬಂಧನಕ್ಕೆ ಆಗ್ರಹಿಸಿ, ಇಂದು ಮೈಸೂರು ಬಂದ್ ಗೆ ಕರೆ ನೀಡಿದ್ದ, ದಲಿತ ಹೋರಾಟ ಸಂಘಗಳು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿವೆ. ಇನ್ನು ಬಂದ್ ಬೆಂಬಲಿಸಿ ಮುಂಜಾನೆ ಚಿತ್ರಪ್ರದರ್ಶನ ರದ್ದು ಮಾಡಲಾಗಿದೆ. ಅಗತ್ಯಬಿದ್ದ ಕಡೆ ಪೆಟ್ರೋಲ್ ಬಂಕ್ ಮುಚ್ಚಲಾಗುವುದೆಂದು ಮಾಲೀಕರಿಗೆ ಸೂಚನೆ ನೀಡಲಾಗಿದೆ ಎಂದು ಪ್ರತಿಭಟನಾ ನಿರತರ ಮುಖಂಡರು ತಿಳಿಸಿದ್ದಾರೆ. ಸಂವಿಧಾನ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಗೋ.ಮಧುಸೂದನ್ ಅವರನ್ನು ಕೂಡಲೆ ಬಂಧಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ