ನಿತ್ಯಾನಂದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!

Big twist to Nithyananda cd case

22-11-2017 487

ಬೆಂಗಳೂರು: ಬಿಡದಿ ಧ್ಯಾನಪೀಠ ಮಠದ ನಿತ್ಯಾನಂದ ಸ್ವಾಮಿಗೆ 7 ವರ್ಷ ಹಿಂದಿನ ರಾಸಲೀಲೆ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದು ಶಿಕ್ಷೆ ಅನುಭವಿಸುವ ಸಾಧ್ಯತೆ ಹೆಚ್ಚಾಗಿದೆ.

ಕಳೆದ 2010ರಲ್ಲಿ ತಮಿಳು ನಟಿಯೊಂದಿಗೆ ರಾಸಲೀಲೆಯಲ್ಲಿ ತೊಡಗಿರುವುದು ಸ್ವಾಮಿ ನಿತ್ಯಾನಂದ ಎನ್ನುವುದನ್ನು ರಾಸಲೀಲೆ ಸಿಡಿಯನ್ನು ಪರೀಕ್ಷೆ ನಡೆಸಿದ ದೆಹಲಿಯ ವಿಧಿವಿಜ್ಞಾನ ಪ್ರಯೋಗಾಲಯ(ಎಫ್‍ಎಸ್‍ಎಲ್) ವರದಿ ದೃಢಪಡಿಸಿದೆ. ಈಗ ಇದೇ ಎಫ್‍ಎಸ್‍ಎಲ್ ವರದಿ ನ್ಯಾಯಾಲಯದಲ್ಲಿ ಪ್ರಮುಖ ಸಾಕ್ಷಿಯಾಗಲಿದೆ.

2010ರಲ್ಲಿ ಅಂದಿನ ಸಿಐಡಿ ಐಜಿಪಿ ಚರಣ್ ರೆಡ್ಡಿ ಈ ವರದಿ ಸಲ್ಲಿಕೆ ಮಾಡಿದ್ದರು. ಸಿಐಡಿ ಸಿಡಿಯಲ್ಲಿರುವುದು ನಿತ್ಯಾನಂದ ಎಂದು ಖಚಿತ ಪಡಿಸಿಕೊಳ್ಳಲು ಸಿಡಿಯನ್ನ ದೆಹಲಿಯ ಎಫ್‍ಎಸ್‍ಎಲ್‍ಗೆ ಕಳುಹಿಸಲಾಗಿತ್ತು. ಆ ಸಂದರ್ಭದಲ್ಲಿ ಸಿಡಿಯಲ್ಲಿರುವುದು ನಾನಲ್ಲ ಎಂದು ನಿತ್ಯಾನಂದ ಸ್ವಾಮಿ ವಾದ ಮಂಡಿಸಿದ್ದರು. ಆದರೆ ಇದೀಗ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದಿದ್ದು, ಸಿಡಿಯಲ್ಲಿರುವುದು ನಿತ್ಯಾನಂದ ಅವರೇ ಎಂದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣಕ್ಕೆ ಪ್ರಮುಖ ಸಾಕ್ಷಿ ಸಿಕ್ಕಿದಂತಾಗಿದೆ.

ಇದರಿಂದಾಗಿ ಪ್ರಕರಣದಲ್ಲಿ ನಿತ್ಯಾನಂದಗೆ ಶಿಕ್ಷೆಯಾಗುವ ಸಾಧ್ಯತೆ ಹೆಚ್ಚಿದ್ದು, ಇದೀಗ ಸ್ವಾಮೀಜಿ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ವಿಶ್ವದಾದ್ಯಂತ ಸ್ವಾಮಿ ನಿತ್ಯಾನಂದ ಅವರಿಗೆ ಲಕ್ಷಾಂತರ ಮಂದಿ ಭಕ್ತಾದಿಗಳಿದ್ದು, 2010ರಲ್ಲಿ ಸ್ವಾಮೀಜಿ ತಮಿಳು ನಟಿಯೊಂದಿಗೆ ರಾಸಲೀಲೆಯಲ್ಲಿ ತೊಡಗಿದ್ದಾರೆಂಬ ಸುದ್ದಿ ವಿಶ್ವದಾದ್ಯಂತ ಭಾರೀ ಸಂಚಲನವನ್ನೇ ಸೃಷ್ಟಿಸಿತ್ತು. ಆ ಬಳಿಕ ಸುಪ್ರೀಂ ಕೋರ್ಟ್ ನಿತ್ಯಾನಂದ ಅವರ ಪುರುಷತ್ವ ಪರೀಕ್ಷೆ ನಡೆಸಲು ಆದೇಶ ನೀಡಿತ್ತು.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ