ಬೆಂಗಳೂರು ಪೊಲೀಸ್ ಆಯುಕ್ತರಿಗೆ ನೊಟೀಸ್

Notice to Bangalore city police Commissioner

22-11-2017

ಬೆಂಗಳೂರು: ಮಾನವ ಹಕ್ಕುಗಳ ಆಯೋಗದಿಂದ ನಗರ ಪೊಲೀಸ್ ಆಯುಕ್ತರಾದ ಟಿ.ಸುನೀಲ್ ಕುಮಾರ್ ಅವರಿಗೆ ನೊಟೀಸ್ ಜಾರಿ ಮಾಡಲಾಗಿದೆ. ಯಲಹಂಕದಲ್ಲಿ ಟೀ ಮಾರುತ್ತಿದ್ದ ಅಂಗಡಿಯವರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಟೀಸ್ ನೀಡಲಾಗಿದೆ. ಆಕ್ಟೋಬರ್ 13 ರಂದು ಹೊಯ್ಸಳ ಸಿಬ್ಬಂದಿ ಮಾಮೂಲಿ ಕೊಡಲಿಲ್ಲ ಎಂದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ, ರಾಜು ಹಾಗೂ ಅಂಬಿಕಾ ದಂಪತಿ ದೂರು ನೀಡಿದ್ದರು. ಯಲಹಂಕದ ಎನ್.ಇ.ಎಸ್ ವೃತ್ತದಲ್ಲಿ ತಳ್ಳುವ ಗಾಡಿಯಲ್ಲಿ ಟೀ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದ ದಂಪತಿ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದರು.

ಈ ಕುರಿತಂತೆ ಮಾಧ್ಯಮಗಳಲ್ಲಿನ ವರದಿ ನೋಡಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಮಾನವ ಹಕ್ಕುಗಳ ಆಯೋಗ 6 ವಾರಗಳಲ್ಲಿ ವರದಿ ನೀಡುವಂತೆ, ನಗರ ಪೊಲೀಸ್ ಆಯುಕ್ತರಿಗೆ ನೊಟೀಸ್ ನೀಡಿದೆ.

Links :
Commissioner of Bengaluruಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ