ಬೆಳಗಾವಿಯಲ್ಲಿ ವಾಟಾಳ್ ಆಕ್ರೋಶ

Vatal protest in suvarna soudha

22-11-2017

ಬೆಳಗಾವಿ: ಬೆಳಗಾವಿ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡದ ಜನಪ್ರತಿನಿಧಿಗಳು, ಉತ್ತರ ಕರ್ನಾಟಕ, ಹೈದ್ರಾಬಾದ್ ಕರ್ನಾಟಕ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯವಹಿಸಿದ್ದಾರೆ ಎಂದು, ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಅಧಿವೇಶನಕ್ಕೆ ಮುತ್ತಿಗೆ ಹಾಕಲು ಹೊಟಿದ್ದ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್,  ಕಳಸಾ ಬಂಡೂರಿ, ಮಹಾದಾಯಿ ಯೋಜನೆ ಬಗ್ಗೆ ಜನಪ್ರತಿನಿಧಿಗಳು ಅಸಡ್ಡೆ ತೋರಿದ್ದಾರೆ ಎಂದು ಗುಡುಗಿದರು.

ಇನ್ನು ಅಧಿವೇಶನಕ್ಕೆ ಗೈರಾಗುವ ಜನಪ್ರತಿನಿಧಿಗಳಿಗೆ ಛೀಮಾರಿ ಹಾಕಿದ ವಾಟಾಳ್, ಸಭೆಗೆ ಗೈರು ಹಾಜರಾಗೋ ಶಾಸಕರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕ ಸಂಭಾಜೀ ಪಾಟೀಲ್ ನನ್ನು ಸ್ಪೀಕರ್ ಹೆಗಲ ಮೇಲೆ ಕೂರಿಸಿಕೊಂಡಿದ್ದಾರೆ. ಸಂಭಾಜೀ ಪಾಟೀಲ್ನನ್ನು ಸೌಧದಿಂದ ಹೊರಗೆ ಹಾಕಬೇಕು ಎಂದು ಆವೇಶದಿಂದ ನುಡಿದರು. ಸುವರ್ಣಸೌಧ ನಿರ್ಮಿಸಿದ ಉದ್ದೇಶ ಈಡೇರಿಲ್ಲ. ಉತ್ತರ ಕರ್ನಾಟಕ, ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿ ಬಗ್ಗೆ ಸರ್ಕಾರ ಶ್ವೇತ ಪ್ರತ ಹೊರಸಿಬೇಕು ಎಂದು ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ