ಗುತ್ತಿಗೆ ನೌಕರರ ಪ್ರತಿಭಟನೆ

Forest Contract workers

22-11-2017

ಚಾಮರಾಜನಗರ: ಗುತ್ತಿಗೆ ಪದ್ಧತಿ ರದ್ದು ಪಡಿಸುವಂತೆ ಒತ್ತಾಯಿಸಿ, ಅರಣ್ಯ ಇಲಾಖೆಯ ಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದ್ದಾರೆ. ಚಾಮರಾಜನಗರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ ಸಿಬ್ಬಂದಿ, ಸಿಸಿಎಫ್ ಕಚೇರಿ ಎದುರು ಜಮಾಯಿಸಿ ಗುತ್ತಿಗೆ ಪದ್ಧತಿ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಎಲ್ಲ ನೌಕರರಿಗೂ ಕಡ್ಡಾಯವಾಗಿ ಗುರುತಿನ ಚೀಟಿ ನೀಡಬೇಕು, ಗುತ್ತಿಗೆ ನೌಕರರಿಗೂ ಸಾರ್ವತ್ರಿಕ ರಜೆ ಸೇರಿದಂತೆ ವಿವಿಧ ಬೇಡಿಕೆ ಮತ್ತು ಪ್ರಮುಖವಾಗಿ ಸೇವಾ ಭದ್ರತೆ ಒದಗಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ