ತಡರಾತ್ರಿ ರೌಡಿಗಳ ದಾಂಧಲೆ !

The nightmare of rowdys!

23-11-2017

ಹಾಸನ: ಬೆಂಗಳೂರು ಮೂಲದ ರೌಡಿ ಗ್ಯಾಂಗ್, ಹಾಸನದ ರಿಂಗ್ ರಸ್ತೆಯಲ್ಲಿ ನಿನ್ನೆ ತಡರಾತ್ರಿ ದಾಂಧಲೆ ನಡೆಸಿದ್ದಾರೆ. ರೌಡಿಯ ಗ್ಯಾಂಗ್ ರಸ್ತೆ ಪಕ್ಕದಲ್ಲಿ ಟಿಟಿಯಲ್ಲಿ ಕುಳಿತು ಮದ್ಯಪಾನ ಮಾಡುತ್ತಿದ್ದರು. ಸ್ವಲ್ಪ ಸಮಯದ ನಂತರ ಅಲ್ಲೆ ಪಕ್ಕದಲ್ಲಿದ್ದ ಅಂಗಡಿ ಎದುರು, ಮೂತ್ರ ವಿಸರ್ಜನೆ ಮಾಡುತ್ತಿದ್ದು, ಇದನ್ನು ಪ್ರಶ್ನಿಸಿ ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ. ಇದರಿಂದ ರೊಚ್ಚಿಗೆದ್ದ ರೌಡಿಗಳು ಸ್ಥಳಿಯರ ಮೇಲೆ ಹಲ್ಲೆ ನಡೆಸಿದ್ದಾರೆ. ಅದಲ್ಲದೇ ಕಣ್ಣಿಗೆ ಖಾರದ ಪುಡಿ ಎರಚಿದ್ದಾರೆ. ಇದನ್ನು ನೋಡುತ್ತಿದ್ದ ಸ್ಥಳೀಯರೆಲ್ಲರು ಒಟ್ಟಾಗಿ ರೌಡಿಗಳ ಮೇಲೆ ಪ್ರತಿದಾಳಿ ನಡೆಸಿದ್ದಾರೆ. ಐವರು ರೌಡಿಗಳನ್ನು ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಷ್ಟರಲ್ಲಾಗಲೇ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಪರಿಸ್ಥಿಸಿ ವಿಕೋಪಕ್ಕೆ ಹೋಗುವುದನ್ನು ತಪ್ಪಿಸಿದ್ದಾರೆ. ಪೊಲೀಸರು ರೌಡಿಗಳನ್ನು ವಶಕ್ಕೆ ಪಡೆದಿದ್ದು, ಟಿಟಿಯನ್ನು ಶೋಧಿಸಿದ್ದಾರೆ. ಈ ವೇಳೆ ಟಿಟಿಯಲ್ಲಿ ಖಾರದ ಪುಡಿ, ಡ್ರ್ಯಾಗರ್, ಮಾರಕಾಸ್ತ್ರಗಳು ಪತ್ತೆಯಾಗಿವೆ. ಇವೆಲ್ಲವನ್ನೂ ವಶಪಡಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Rowdy Hassan ರೊಚ್ಚಿಗೆದ್ದ ರೌಡಿ ಗ್ಯಾಂಗ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ