ಕಾರು ಪಲ್ಟಿ ಓರ್ವ ಸಾವು

Car accident 1 dead 3 injured

23-11-2017 265

ಚಿತ್ರದುರ್ಗ: ಚಾಲಕನ ನಿಯಂತ್ರನ ತಪ್ಪಿ ಚಲಿಸುತ್ತಿದ್ದ ಕಾರು ಪಲ್ಟಿಯಾಗಿ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಘಟನೆಯು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಗ್ರಾಮದ ಬಳಿ ನಡೆದಿದೆ. ಮಸ್ಕಲ್ ಗ್ರಾಮದ ವೀರೇಶ್ (35)ಎಂದು ಮೃತ ವ್ಯಕ್ತಿಯನ್ನು ಗುರುತಿಸಲಾಗಿದೆ.

ಕಾರು ಚಾಲಕ ರಘು, ಗುರುಪ್ರಸಾದ್, ಮುದ್ದಣ್ಣಗೆ ಗಂಭೀರ ಗಾಯಗಳಾಗಿವೆ. ಬೆಂಗಳೂರಿನಿಂದ ಬಂದ ಗೆಳೆಯನನ್ನು ಕರೆತರಲು ಹೋಗಿದ್ದಾಗ ಈ ಅವಘಡ ಸಂಭವಿಸಿದೆ. ಚಾಲಕ ರಘುನನ್ನು ಬೆಂಗಳೂರಿನ ನಿಮ್ಹಾನ್ಸ್ ಗೆ ದಾಖಲಿಸಲಾಗಿದೆ. ಇಬ್ಬರು ಹಿರಿಯೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 ಸಂಬಂಧಿತ ಟ್ಯಾಗ್ಗಳು

Car roled Chitradurga ಹಿರಿಯೂರು ನಿಮ್ಹಾನ್ಸ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ