‘ಕೇಂದ್ರ ಸರ್ಕಾರದಿಂದ ರೈತರಿಗೆ ಟೋಪಿ’-ಎಚ್ಡಿಕೆ

23-11-2017 304
ಬೆಳಗಾವಿ: ಬೆಳಗಾವಿಯಲ್ಲಿ ಜೆಡಿಎಸ್ನ ನೂತನ ಜಿಲ್ಲಾ ಕಾರ್ಯಾಲಯವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಉದ್ಘಾಟನೆ ಮಾಡಿದ್ದಾರೆ. ಬೆಳಗಾವಿ ನಗರದ ಮಹಾಂತೇಶ ನಗರದಲ್ಲಿನ ನೂತನ ಜಿಲ್ಲಾ ಕಾರ್ಯಾಲವನ್ನು ರಿಬ್ಬನ್ ಕತ್ತರಿಸುವ ಮೂಲಕ ಕುಮಾರಸ್ವಾಮಿ ಉದ್ಘಾಟಿಸಿ, ಕಾರ್ಯಾಲಯದಲ್ಲಿ ನಡೆದ ಘನ ಹೋಮ, ರುದ್ರ ಹೋಮದಲ್ಲಿ ಭಾಗಿಯಾದರು.
ಇನ್ನು ಈ ವೇಳೆ ಮಾತನಾಡಿದ ಅವರು, ಬಿಜೆಪಿ-ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ಬೇಸತ್ತ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಕಬ್ಬು, ಗೋವಿನಜೋಳ ಮೊದಲಾದ ಬೆಳೆಗಳ ಬೆಲೆ ಕುಸಿತವಾಗಿದೆ. ಆದರೂ, ಸರ್ಕಾರ ರೈತರ ನೆರವಿಗೆ ಬರುತ್ತಿಲ್ಲ ಎಂದು ಆರೋಪಿಸಿದರು.
ಫಸಲ್ ಭೀಮಾ ಯೋಜನೆಯಡಿ ವಿಮೆ ಮಾಡಿಸಿದ ರೈತರಿಗೆ ವಿಮಾ ಹಣ ಬಿಡುಗಡೆಯಾಗಿಲ್ಲ. ಕೇಂದ್ರ ಸರ್ಕಾರ ರೈತರಿಗೆ ಟೋಪಿ ಹಾಕಿ, ಕಾರ್ಪೋರೇಟ್ ಕಂಪನಿಗಳಿಗೆ ಸರ್ಕಾರ ಮಣೆ ಹಾಕುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕಾಗಿದ್ದ ಎರಡೂ ರಾಷ್ಟ್ರೀಯ ಪಕ್ಷಗಳು ವಿಫಲವಾಗಿವೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮತದಾರ ಪ್ರಭು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದು, ಪ್ರಾದೇಶಿಕ ಪಕ್ಷಕ್ಕೆ ಅಧಿಕಾರ ನೀಡಲಿದ್ದಾರೆಂಬ ವಿಶ್ವಾಸವಿದೆ ಎಂದರು.
ಒಂದು ಕಮೆಂಟನ್ನು ಹಾಕಿ