ಸಿಎಂ ನಿವಾಸದಲ್ಲಿ ನಾಳೆ ಮಹತ್ವದ ಸಭೆ

Vital meeting at CM

24-11-2017

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ, ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ತಮ್ಮ ಬೆಂಗಳೂರಿನ ನಿವಾಸ ಕಾವೇರಿಯಲ್ಲಿ ಸಭೆ ಕರೆದಿರುವ ಸಿಎಂ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷರಾದ ಎಸ್.ಆರ್.ಪಾಟೀಲ್, ದಿನೇಶ್ ಗುಂಡೂರಾವ್, ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಮತ್ತಿತರ ಕಾಂಗ್ರೆಸ್ ಮುಖಂಡರು ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಸಭೆಯಲ್ಲಿ ಚುನಾವಣಾ ಸಿದ್ಧತೆ, ಟಿಕೇಟ್ ಹಂಚಿಕೆ ವಿಚಾರ, ರಾಜ್ಯಾದ್ಯಂತ ಸಿಎಂ ಪ್ರವಾಸ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ಮತ್ತು ನಿರ್ಣಯಗಳು ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ