ಮೆಟ್ರೋದಲ್ಲಿ ಯುವಕರ ಅಸಭ್ಯ ವರ್ತನೆ

metro and harrasement

24-11-2017

ಬೆಂಗಳೂರು: ನಗರದ ಎಂಜಿ ರಸ್ತೆಯಿಂದ ವಿಜಯನಗರಕ್ಕೆ ಬರುವ ವೇಳೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯ ಬಳಿ ಯುವಕರ ಗುಂಪೊಂದು ಅಸಭ್ಯವಾಗಿ ವರ್ತಿಸಿದ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಮಂಗಳವಾರ ರಾತ್ರಿ 8.15ರ ವೇಳೆ ವಿದ್ಯಾರ್ಥಿನಿ ಮೆಟ್ರೋ ರೈಲಿನಲ್ಲಿ ಬರುವಾಗ ಯುವಕರ ಗುಂಪೊಂದು ರೈಲಿನಲ್ಲಿ ಯುವತಿಯನ್ನು ಚುಡಾಯಿಸಿದ್ದಲ್ಲದೇ, ಅವಾಚ್ಯ ಶಬ್ದಗಳಿಂದ ರೇಗಿಸಿದ್ದಲ್ಲದೇ ವಿಜಯನಗರ ಮೆಟ್ರೋ ನಿಲ್ದಾಣದಲ್ಲಿ ಇಳಿದ ನಂತರವೂ ಹಿಂಬಾಲಿಸಿಕೊಂಡು ಹೋಗಿದ್ದಾರೆ.

ಈ ವೇಳೆ ವಿದ್ಯಾರ್ಥಿನಿ ಅಲ್ಲೇ ಇದ್ದ ಮಹಿಳಾ ಸೆಕ್ಯೂರಿಟಿ ಗಾರ್ಡ್‍ಗೆ ವಿಚಾರ ತಿಳಿಸಿದ್ದಾರೆ. ಮಹಿಳಾ ಸಿಬ್ಬಂದಿ ಆ ಗುಂಪನ್ನು ಹಿಡಿಯಲು ಯತ್ನಿಸಿದಾಗ ಯುವಕರು ಅಲ್ಲಿಂದ ಪರಾರಿಯಾಗಿದ್ದಾರೆ. ವಿಷಯ ತಿಳಿದ ಹೊಯ್ಸಳ ಪೊಲೀಸರು ವಿದ್ಯಾರ್ಥಿನಿಯಿಂದ ಮಾಹಿತಿ ಪಡೆದಿದ್ದಾರೆ. ಆದರೆ ವಿದ್ಯಾರ್ಥಿನಿ ದೂರು ನೀಡಲು ನಿರಾಕರಿಸಿದ್ದಾರೆ. ಚಲಿಸುವ ರೈಲಿನಲ್ಲಿ ಕಿರುಕುಳ ನೀಡಲಾಗಿದ್ದು, ಮೆಟ್ರೋ ಸಿಬ್ಬಂದಿ ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪುಂಡರ ಗುಂಪಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್‍ಕುಮಾರ್ ತಿಳಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ