‘ಹಲ್ಲೆ ನಡೆಸುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ’

police commissioner warning

24-11-2017

ಬೆಂಗಳೂರು: ಆರ್.ಟಿ. ನಗರದ ದಿಣ್ಣೂರು ಮುಖ್ಯರಸ್ತೆಯಲ್ಲಿ ಹೋಟೆಲ್ ಮಾಲೀಕನ ಮೇಲೆ ನಡೆಸಿದ ಎಸಿಪಿ ಮಂಜುನಾಥ ಬಾಬು ಅವರ ಮೇಲೆ ಕ್ರಮ ಕೈಗೊಳ್ಳುವ ವರದಿಯು ರಾಜ್ಯ ಪೊಲೀಸ್ ಮಹಾನಿರ್ದೇಶಕ(ಡಿಜಿ-ಐಜಿಪಿ)ರಿಗೆ ತಲುಪಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದ ಮುಗಿಸಿಕೊಂಡು ಬಂದ ನಂತರ ವರದಿಯನ್ನು ಡಿಜಿ ನೀಲಮಣಿ ರಾಜು ಅವರು ಪರಿಶೀಲಿಸಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಅವರು, ಈ ಕುರಿತಂತೆ ಮಾತನಾಡಿ, ಎಸಿಪಿ ಮಂಜುನಾಥ ಬಾಬು ಅವರು ಹೊಟೇಲ್ ಮಾಲೀಕ ರಾಜೀವ್ ಶೆಟ್ಟಿಗೆ ಲಾಟಿಯಿಂದ ಹೊಡೆದಿರುವ ಸಂಬಂಧ ಉತ್ತರ ವಿಭಾಗ ಡಿಸಿಪಿ ಚೇತನ್ ಸಿಂಗ್ ಅವರು ನನಗೆ ವರದಿ ನೀಡಿದ್ದು, ಅದರಲ್ಲಿ ಮೇಲ್ನೋಟಕ್ಕೆ ಎಸಿಪಿ ಮಾಡಿರುವುದು ತಪ್ಪು ಎಂದು ಕಂಡುಬಂದಿದೆ ಎಂದರು.

ಅದನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಅವರಿಗೆ ವರದಿ ಕಳುಹಿಸಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು. ಪೊಲೀಸರ ಮೇಲೆ ಹಲ್ಲೆ ಪ್ರಕರಣ ಹೆಚ್ಚಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಕರ್ತವ್ಯ ನಿರ್ವಹಿಸುವ ಪೊಲೀಸರ ಮೇಲೆ ಹಲ್ಲೆ ನಡೆಸುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ