‘ಮೊಟ್ಟ ಮೊದಲ ಪಂಚಾಯತ್ ರಾಜ್ ವಿಶ್ವವಿದ್ಯಾಲಯ’   

first ever panchayat Raj university

24-11-2017

ಬೆಳಗಾವಿ: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗದಗದಲ್ಲಿ ಪ್ರಸಕ್ತ ಸಾಲಿನಿಂದ ಪ್ರಾರಂಭವಾಗಿದ್ದು, ಈ ಶೈಕ್ಷಣಿಕ ವರ್ಷಕ್ಕಾಗಿ 26 ಕೋಟಿ 60 ಲಕ್ಷ ರೂಪಾಯಿ ಅನುದಾನ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ವಿಧಾನಪರಿಷತ್ತಿಗಿಂದು ತಿಳಿಸಿದ್ದಾರೆ.

ಈ ಪೈಕಿ  8 ಕೋಟಿ 30 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದ್ದು, ಇದುವರೆಗೆ 3 ಕೋಟಿ 34 ಲಕ್ಷ ರೂಪಾಯಿಗೂ ಹೆಚ್ಚು ಮೊತ್ತ ವೆಚ್ಚವಾಗಿದೆ. ಪಂಚಾಯತ್ ರಾಜ್ ವ್ಯವಸ್ಥೆ ಬಲಪಡಿಸುವ ಸಲುವಾಗಿ 5 ಕೋರ್ಸ್‍ಗಳನ್ನು  ಪ್ರಾರಂಭಿಸಲಾಗಿದ್ದು, 5 ಶಾಲೆಗಳಲ್ಲಿ ತರಗತಿಗಳು ನಡೆಯುತ್ತಿವೆ. ದೇಶದ ಮೊಟ್ಟಮೊದಲ ಗ್ರಾಮೀಣಾಭಿವೃದ್ಧಿ- ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಇದಾಗಿದೆ ಎಂದು ಅವರು ಬಿಜೆಪಿಯ ಎಸ್.ವಿ.ಸಂಕನೂರ ಅವರ ಪ್ರಶ್ನೆಗೆ ಉತ್ತರಿಸಿ, ತಿಳಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ