ವಿಷ ಸೇವಿಸಿ ರೈತ ಆತ್ಮಹತ್ಯೆ

Farmer committed suicide

25-11-2017

ಯಾದಗಿರಿ: ಸಾಲಬಾಧೆ ತಾಳಲಾರದೆ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು, ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ತಡಬಿಡಿಯಲ್ಲಿ ನಡೆದಿದೆ. ಹೊನ್ನಪ್ಪ (35) ನಾಲ್ವಡಗಿ ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ. ಬ್ಯಾಂಕ್ ಹಾಗೂ ಕೈಸಾಲ ಸೇರಿ ಸುಮಾರು 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಇತ್ತ ಬೆಳೆಯು ಕೈಕೊಟ್ಟಿದ್ದು, ಸಾಲವನ್ನೂ ತೀರಿಸಲಾಗದೇ ಮನನೊಂದ ರೈತ, ತನ್ನ ಜಮೀನಿನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

farmer suicide Yadgir ಶಹಾಪುರ ಆತ್ಮಹತ್ಯೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ