ಗೃಹಿಣಿ ಮೇಲೆ ಕಾಮುಕರ ಅಟ್ಟಹಾಸ !

gang rape in rural Bangalore

25-11-2017

ಬೆಂಗಳೂರು: ಬೆಂಗಳೂರು ಗ್ರಾಮಾಂತರ ನೆಲಮಂಗಲದಲ್ಲಿ ಕಾಮುಕರು ಅಟ್ಟಹಾಸ ಮೆರೆದಿದ್ದಾರೆ. ರೌಡಿಶೀಟರ್ ಹಾಗೂ ಆತನ ಸಹಚರರು, ಗೃಹಿಣಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ನೆಲಮಂಗಲ ಸಮೀಪದ ಸಿದ್ದನಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ನಾಲ್ವರು ಕಾಮುಕರು ಮನೆಯಲ್ಲಿ ಒಂಟಿಯಾಗಿದ್ದ ಗೃಹಿಣಿಯ ಮನೆಯಲ್ಲಿಯೇ ಈ ನೀಚ ಕೃತ್ಯ ಎಸಗಿದ್ದಾರೆ. ಆರು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇನ್ನು ಕೃತ್ಯ ಎಸಗಿದ ಮೂವರು ಆರೋಪಿಗಳನ್ನು ಮಾದನಾಯಕನ ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ಕುಮಾರ್, ಪುನೀತ್, ವೆಂಕಟೇಶ್ ಬಂಧಿತ ಆರೋಪಿಗಳು. ಕೃತ್ಯದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿ ವಿಜಿ ಪರಾರಿಯಾಗಿದ್ದು, ಶೋಧಕಾರ್ಯ ನಡೆಸಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Rape Rural Bangalore ಕಾಮುಕರು ರೌಡಿಶೀಟರ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ