ಕತ್ತು ಕೊಯ್ದು ವ್ಯಕ್ತಿ ಕೊಲೆ

Horrific murder in Vijayapura

25-11-2017

ವಿಜಯಪುರ: ವಿಜಯಪುರದಲ್ಲಿ ವ್ಯಕ್ತಿಯೊಬ್ಬರನ್ನು ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿದ್ದಾರೆ. ಗಣಪತಿ ಕವಲಗಿ(35) ಎಂದು ಕೊಲೆಯಾದ ವ್ಯಕ್ತಿಯನ್ನು ಗುರುತಿಸಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಅಗರಖೇಡ ಗ್ರಾಮದಲ್ಲಿ ಈ ಭೀಕರ ಕೊಲೆ ನಡೆದಿದೆ. ಅಗರಖೇಡ ಗ್ರಾಮದ ಖಾಸಗಿ ಹೈಸ್ಕೂಲ್ ಮೈದಾನದಲ್ಲಿ ಮೃತ ವ್ಯಕ್ತಿಯ ದೇಹ ಪತ್ತೆಯಾಗಿದೆ. ಶವವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ವಿಜಯಪುರದ ಇಂಡಿ ಗ್ರಾಮೀಣ ಪೊಲೀಸರು ದೌಡಾಯಿಸಿದ್ದಾರೆ. ಘಟನೆ ನಿನ್ನೆ ತಡರಾತ್ರಿ ನಡೆದಿರಬಹದುದೆಂದು ಶಂಕಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ