‘ರಾಜ್ಯಸರ್ಕಾರ ಅಲ್ಪಸಂಖ್ಯಾತರನ್ನು ರಕ್ಷಿಸುತ್ತಿಲ್ಲ’

HDK allegation on state and centre

25-11-2017

ಬೀದರ್: ಕೇಂದ್ರ ಮತ್ತು ರಾಜ್ಯ ಸರಕಾರಗಳೆರಡು ಬಡ ರೈತರ ಬದುಕಿನ ಜೊತೆಗೆ ಚಲ್ಲಾಟವಾಡುತ್ತಿವೆ. ರೈತರು ಕಷ್ಟ ಪಟ್ಟು ಬೆಳೆದ ಬೆಳೆಗೆ ಸರಕಾರದಿಂದ ಉತ್ತಮ ಬೆಲೆ ಸಿಗುತ್ತಿಲ್ಲ ಎಂದು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಕಿಡಿಕಾರಿದ್ದಾರೆ.  

ಬೀದರ್ ನ ಬಸವ ಕಲ್ಯಾಣದಲ್ಲಿಂದು ಮಾತನಾಡಿದ ಅವರು, ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ, ಸರಕಾರಕ್ಕೆ ಅನುಕೂಲವಾಗಿದೆ ರೈತರಿಗಲ್ಲ ಎಂದು ಆರೋಪಿಸಿದರು. ಶ್ರೀಮಂತ ಉದ್ಯಮಿಗಳ ಪರ ಕೇಂದ್ರ ಕೆಲಸಮಾಡುತ್ತಿದೆ ಬಡ ರೈತರ ಪರ ಅಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇನ್ನು ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು, ಸರಕಾರ ಅವಕಾಶವೇ ಕೊಡಲಿಲ್ಲ, ಸ್ವಂತ ಕಾಂಗ್ರೆಸ್ ಸರಕಾರದ ಶಾಸಕರೇ ತಮ್ಮ ಸರಕಾರದ ಬಗ್ಗೆ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಹೇಳಿದರು.

ಶೀಘ್ರದಲ್ಲೇ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿಯೂ, ಈಗಾಗಲೇ 150 ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿದೆ ಎಂದು ಇದೇ ವೇಳೆ ಮಾಹಿತಿ ನೀಡಿದರು. ನೈಸ್ ಕಂಪನಿಯ ಜೊತೆ ಡೀಲ್ ಮಾಡಿಕೊಳ್ಳುವ ಅವಶ್ಯಕತೆ ಜೆಡಿಎಸ್ ಗಿಲ್ಲ ಎಂದಿದ್ದು, ಕಾಂಗ್ರೆಸ್‌ ಸರಕಾರ ರಾಜ್ಯದಲ್ಲಿ ಅಲ್ಪಸಂಖ್ಯಾತರನ್ನು ರಕ್ಷಿಸುತ್ತಿಲ್ಲ ಅವರನ್ನ ತುಳಿಯುವ ಕೆಲಸ ಮಾಡುತ್ತಿದೆ ಎಂದು ನೇರವಾಗಿ ಆರೋಪಿಸಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ