ಸಿಲಿಕಾನ್ ಸಿಟಿಯಲ್ಲಿ ಭೀಕರ ಕೊಲೆ

horrific murder in Silicon City

25-11-2017

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ ಮಧ್ಯ ರಾತ್ರಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆಗೈದಿದ್ದಾರೆ. ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿದ್ದು, ಸಂತೋಷ್ (42) ಎಂದು ಮೃತ ವ್ಯಕ್ತಿಯನ್ನು ಗುರುತಿಸಲಾಗಿದೆ. ಮೃತ ಸಂತೋಷ್, ನಗರದ ಬಿಳೇಕಲ್ಲು ನಿವಾಸಿ ಎಂದು ತಿಳಿದು ಬಂದಿದೆ. ತಡರಾತ್ರಿ 2.30 ರ ವೇಳೆ ಬನ್ನೇರುಘಟ್ಟ ರಸ್ತೆ ಸಮೀಪದಲ್ಲಿ ಕೊಲೆ ನಡೆದಿದೆ. ಸಂತೋಷ್ ಕೆಲಸ ಬಿಟ್ಟು ಅವರಿವರ ಜೊತೆ ಓಡಾಡಿಕೊಂಡು ಕಾಲ ಕಳೆಯುತ್ತಿದ್ದು, ಜೊತೆಯಲ್ಲಿ ಕುಡಿದು ಬಳಿಕ, ಕಲ್ಲೆತ್ತಿ ಹಾಕಿ  ಸಂತೋಷ್ ನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ ಪೊಲೀಸರು. ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

silicon city Murder ಮಧ್ಯ ರಾತ್ರಿ ಬೆಂಗಳೂರು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ