ವೇತನಕ್ಕಾಗಿ ಪ್ರತಿಭಟನೆ...!

Protest For wages...!

27-11-2017

ಬಳ್ಳಾರಿ: ಬಾಕಿ ಇರುವ ಐದು ತಿಂಗಳ ವೇತನ ಪಾವತಿಸುವಂತೆ ಆಗ್ರಹಿಸಿ, ಬಳ್ಳಾರಿಯಲ್ಲಿ ಹೊರಗುತ್ತಿಗೆ ಪೌರ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ. ಸ್ವಚ್ಚಕಾರ್ಯವನ್ನು ಸ್ಥಗಿತಗೊಳಿಸಿದ ಗುತ್ತಿಗೆ ಕಾರ್ಮಿಕರು, ಬಳ್ಳಾರಿ ಮಹಾನಗರ ಪಾಲಿಕೆ ಮುಂದೆ ಪ್ರತಿಭಟಿಸಿದ್ದಾರೆ. ಪೊರಕೆ ಸಮೇತ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಮಹಿಳಾ ಕಾರ್ಮಿಕರು ಸೇರಿದಂತೆ ನೂರಾರು ಮಂದಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ತಮ್ಮ ವೇತನ ನೀಡಲು ಸಹ ಅವರಿವರ ಆದೇಶ ನೀಡಬೇಕು ಎನ್ನುತ್ತಾರೆ ಅಧಿಕಾರಿಗಳು, ಕೆಲಸ ಮಾಡಿ ವೇತನಕ್ಕಾಗಿ ಕಾಯುವಂತಾಗಿದೆ ಎಂದು, ಮಹಾನಗರ ಪಾಲಿಕೆ ಆಯುಕ್ತರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೆ ವೇತನ ನೀಡುವಂತೆ ಕಾರ್ಮಿಕರು ಒತ್ತಾಯಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

pourakarmika Bellary ಸ್ವಚ್ಚಕಾರ್ಯ ವೇತನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ