ಮಕ್ಕಳ ಸಾಹಿತ್ಯ ಸಮ್ಮೇಳನ

Children

27-11-2017

ಹಾಸನ: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ, ಜಿಲ್ಲಾ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಮುಂದಿನ ತಿಂಗಳು, ಡಿಸೆಂಬರ್ 6ರಿಂದ 2 ದಿನಗಳ ಕಾಲ ಸಮ್ಮೇಳನ ನಡೆಯಲಿದ್ದು, ಸಮ್ಮೇಳನದ ಅಧ್ಯಕ್ಷೆಯಾಗಿ ಹಾಸನದ ಚಂದನ ಎಂಬ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾರೆ. ಚಂದನಾ ಹಾಸನದ ಸರ್ಕಾರಿ ಕಲಾ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಸಮ್ಮೇಳನಕ್ಕೆ ಆಯ್ಕೆಯಾಗಿದ್ದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ. ನನ್ನ ಶ್ರಮದ ಹಿಂದೆ ನನ್ನ ಪೋಷಕರು ಮತ್ತು ಕಾಲೇಜಿನ ಅಧ್ಯಾಪಕ ವೃಂದವಿದೆ, ಅವರಿಗೆ ಈ ಸಮ್ಮೇಳನವನ್ನು ಅರ್ಪಣೆ ಮಾಡುತ್ತೇನೆ ಎಂದು ಸಂತಸದಿಂದ ನುಡಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ