ಉದ್ಧವ್ ಠಾಕ್ರೆ ಭಾವಚಿತ್ರ ದಹಿಸಿ ಆಕ್ರೋಶ !

Protest against MES

27-11-2017

ಬೆಳಗಾವಿ: ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ, ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ನೇತೃತ್ವದಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿ, ಉದ್ಧವ್ ಠಾಕ್ರೆ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಮಾತನಾಡಿದ ಪ್ರವೀಣ್ ಶೆಟ್ಟಿ, ಠಾಕ್ರೆ ವಂಶದ ಎಲ್ಲರು ಕೆಟ್ಟ ಹಾದಿಯನ್ನೇ ಹಿಡಿದವರು, ಬಾಳ ಠಾಕ್ರೆ ಹಾದಿಯನ್ನೇ ಉದ್ಧವ್ ಠಾಕ್ರೆ ಹಿಡಿದಿದ್ದಾರೆ. ಉದ್ಧವ್ ಠಾಕ್ರೆ ಕರ್ನಾಟಕದಲ್ಲಿ ಶಿವಸೇನೆ ಸ್ಥಾಪನೆಗೆ ಹೊರಟಿದ್ದಾರೆ, ಆದರೆ ಕರ್ನಾಟಕದಲ್ಲಿ ಶಿವಸೇನೆ ಪಕ್ಷ ಸ್ಥಾಪನೆಗೆ ಬಿಡಲ್ಲ ಎಂದು ಆಕ್ರೋಶದಿಂದ ನುಡಿದರು.

ಯಾವ ನೆಲದಲ್ಲಿ ಬದುಕುತ್ತೇವೆಯೋ ಆ ನೆಲಕ್ಕೆ ಗೌರವ ಕೊಡುವುದನ್ನು ಕಲಿಯಬೇಕು, ಉದ್ಧವ ಠಾಕ್ರೆಯ ಬೆಳಗಾವಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಂಇಎಸ್ ಕಾರ್ಯಕರ್ತರ ವಿರುದ್ಧ ರಾಜ್ಯ ಸರ್ಕಾರ ಗುಂಡಾ ಕಾಯ್ದೆ ಅಡಿ ಪ್ರಕರಣ ದಾಖಲಿಸ ಬೇಕು. ಎಂಇಎಸ್ ನ ಎಲ್ಲ ನಾಡದ್ರೋಹಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಪ್ರವೀಣ್ ಶೆಟ್ಟಿ ಆಗ್ರಹಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ