ರೌಡಿ ಮನೆ ಮೇಲೆ ಪೆಟ್ರೋಲ್ ಬಾಂಬ್...!

Petrol bomb on rowdy home..!

27-11-2017

ಬೆಂಗಳೂರು: ನಗರದ ಹೊರವಲಯದ ನೆಲಮಂಗಲ ಬಳಿಯ, ರೌಡಿ ಶೀಟರ್ ಬೆತ್ತನಗೆರೆ ಮಂಜನ ಮನೆ ಮೇಲೆ ದುಷ್ಕರ್ಮಿಗಳು ನಿನ್ನೆ ರಾತ್ರಿ ಪೆಟ್ರೋಲ್ ಬಾಂಬ್ ದಾಳಿ ನಡೆಸಿ ಪರಾರಿಯಾಗಿದ್ದು, ಯಾವುದೇ ಆಪಾಯ ಸಂಭವಿಸಿಲ್ಲ. ಮನೆಯಲ್ಲಿದ್ದ ಮಂಜನ ತಂದೆ ಹಾಗೂ ತಾಯಿ ಕುಸುಮ ಅದೃಷ್ಟವಷಾತ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ನಿನ್ನೆ ಸಂಜೆ ಬೆತ್ತನಗೆರೆ ಮಂಜನ ಮನೆ ಬಳಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು, ನಿಮ್ಮ ಮಗನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಪರಾರಿಯಾಗಿದ್ದರು.

ಮತ್ತೆ ಮಧ್ಯರಾತ್ರಿ ಬಂದಿರುವ ದುಷ್ಕರ್ಮಿಗಳು ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಹಳೇದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ. ಮಂಜನ ತಂದೆ ಹನುಮಂತರಾಯಪ್ಪ ಅವರು ಹಳೇ ವೈಷಮ್ಯದಿಂದ ಯಶವಂತಪುರದ ಆಟೋ ಸ್ವಾಮಿ ಎಂಬಾತ ಈ ಕೃತ್ಯ ನಡೆಸಿ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿರುವ ಮಾದನಾಯಕನಹಳ್ಳಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ