ಎಸಿಬಿ ಬಲೆಗೆ ತಹಶೀಲ್ದಾರ್

ACB arrested Tahsildar

27-11-2017

ಬೆಂಗಳೂರು: ಕೋಲಾರ ಜಿಲ್ಲೆ, ಬಂಗಾರಪೇಟೆ ತಾಲ್ಲೂಕಿನ ರೈತರೊಬ್ಬರ ಜಮೀನು ಭೂ ಪರಿವರ್ತನೆಗೆ ಲಂಚ ಪಡೆಯಲು ಯತ್ನಿಸಿದ ತಾಹಶೀಲ್ದಾರ್ ಸತ್ಯಪ್ರಕಾಶ ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಜಮೀನು ಭೂ ಪರಿವರ್ತನೆಗೆ ಸಂಬಂಧಿಸಿದ ಕಡತವನ್ನು ಉಪವಿಭಾಗಾಧಿಕಾರಿಗಳಿಗೆ ಶಿಫಾರಸ್ಸು ಮಾಡಲು 10 ಲಕ್ಷ ರೂ, ಲಂಚದ ಹಣ ನೀಡುವಂತೆ ಅರ್ಜಿದಾರರಿಗೆ ಒತ್ತಾಯಿಸಿದ್ದರು. ಈ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ನೀಡಿದ ದೂರು ಆಧರಿಸಿ ಎಸಿಬಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ದೂರುದಾರರಿಂದ 2 ಲಕ್ಷ ರೂ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಸಿಕ್ಕಿ ಬಿದ್ದಿದ್ದಾರೆ. ಅವರ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಎಸಿಬಿ ಕೋಲಾರ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರೆದಿದೆ.


ಸಂಬಂಧಿತ ಟ್ಯಾಗ್ಗಳು

ACB Tahsildar ಭ್ರಷ್ಟಾಚಾರ ಭೂ ಪರಿವರ್ತನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ