ಬಿಜೆಪಿ ರ್ಯಾಲಿಯಿಂದ ಟ್ರಾಫಿಕ್ ಜಾಮ್

28-11-2017 453
ಬಾಗಲಕೋಟೆ: ಬಾಗಲಕೋಟೆಯಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ಹಿನ್ನೆಲೆ, ಸಾರ್ವಜನಿಕರು ಹೈರಾಣಾಗಿದ್ದಾರೆ. ನಗರದ ಪ್ರಮುಖ ಬೀದಿಗಳಲ್ಲಿ ಯಾತ್ರೆ ಹಮ್ಮಿಕೊಂಡಿದ್ದು, ಟ್ರಾಫಿಕ್ ಜಾಮ್ ನಿಂದಾಗಿ ಜನ ತತ್ತರಿಸಿದ್ದಾರೆ. ಜಿಲ್ಲೆಯ ಮುಧೋಳ ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿಯಿಂದ ವಾಹನ ದಟ್ಟಣೆ ಹೆಚ್ಚಾಗಿದ್ದು, ಟ್ರಾಫಿಕ್ ಜಾಮ್ ಆಗಿದೆ. ಮುಧೋಳ ನಗರದಾದ್ಯಂತ ಫುಲ್ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸಂಚಾರ ಅಸ್ತವ್ಯಸ್ಥವಾಗಿದೆ. ನಿಂತಲ್ಲೇ ನಿಂತಿರೋ ಸರ್ಕಾರಿ ಬಸ್ ಗಳು, ಬಸ್ ನಿಲ್ದಾಣದೊಳಕ್ಕೆ ಹೋಗಲಾರದೆ ಹೊರವಲಯದಲ್ಲೇ ಬೀಡುಬಿಟ್ಟಿವೆ. ಕಿಲೋಮೀಟರ್ ಗಟ್ಟಲೆ ವಾಗನಗಳು ಸಾಲುಗಟ್ಟಿ ನಿಂತಿದ್ದು ಪ್ರಯಾಣಿಕರು, ವಾಹನ ಸವಾರರು ಪರದಾಡುವಂತಾಗಿದೆ. ವಿಜಯಪುರ ಧಾರವಾಡ ರಾಜ್ಯ ಹೆದ್ದಾರಿ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಇದರಿಂದ ಸಿಟ್ಟಿಗೆದ್ದಿರುವ ಸಾರ್ವಜನಿಕರು ರ್ಯಾಲಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಂದು ಕಮೆಂಟನ್ನು ಹಾಕಿ