ಮೊಬೈಲ್ ಗಾಗಿ ವ್ಯಕ್ತಿಗೆ ಹಲ್ಲೆ

Assaulted a person for mobile

28-11-2017

ಬೆಂಗಳೂರು: ನೆಲಮಂಗಲದ ತ್ಯಾಮಗೊಂಡ್ಲು ಬಳಿ ಮೊಬೈಲ್‍ಗಾಗಿ ಯುವಕನೋರ್ವನ ಮೇಲೆ ದುಷ್ಕರ್ಮಿಗಳ ಗುಂಪೊಂದು ಗಂಭೀರ ಹಲ್ಲೆ ನಡೆಸಿ ಪರಾರಿಯಾಗಿದೆ. ಗಾಯಗೊಂಡಿರುವ ಜಾರ್ಖಂಡ್ ಮೂಲದ ಗಣೇಶ್, ತ್ಯಾಮಗೊಂಡ್ಲು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ತ್ಯಾಮಗೊಂಡ್ಲು ಬಳಿ ಕೂಲಿ ಕೆಲಸ ಮಾಡುತ್ತಿದ್ದ ಗಣೇಶ್ ನಿನ್ನೆ ರಾತ್ರಿ  ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಾಗ ಅಡ್ಡಗಟ್ಟಿದ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿ ಮೊಬೈಲ್‍ನ್ನು ಕಸಿದು ಪರಾರಿಯಾಗಿದ್ದಾರೆ. ತ್ಯಾಮಗೊಂಡ್ಲು ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

Gang attack Mobile robbery ದುಷ್ಕರ್ಮಿ ಜಾರ್ಖಂಡ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ