ಕಂಠಪೂರ್ತಿ ಕುಡಿದು ಯುವಕ ಆತ್ಮಹತ್ಯೆ

Drunk man suicide

28-11-2017

ಬೆಂಗಳೂರು: ಕುಡಿದ ಮತ್ತಿನಲ್ಲಿ ಅಭಿಜಿತ್ ಎನ್ನುವ ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಆರ್‍ಎಂಸಿ ಯಾರ್ಡ್‍ನ ಗೊರಗುಂಟೆಪಾಳ್ಯದಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಚಿಕ್ಕಮಗಳೂರು ಮೂಲದ ಅಭಿಜಿತ್ (23) ರಾತ್ರಿ ಕೆಲಸ ಮುಗಿಸಿಕೊಂಡು ಕಂಠಪೂರ್ತಿ ಕುಡಿದು ಬಂದ ಆತ, ಗೊರಗುಂಟೆ ಪಾಳ್ಯದ ಎಂಎಸ್‍ಕೆ ನಗರದಲ್ಲಿನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಕ್ಕ- ಪಕ್ಕದ ಮನೆಯವರಿಂದ ಪ್ರಕರಣ ಬೆಳಕಿಗೆ ಬಂದಿದ್ದು, ವಿಷಯ ಪೊಲೀಸರಿಗೆ ತಿಳಿಸಿದ್ದಾರೆ. ಇನ್ನ ಆರ್‍ಎಂಸಿ ಯಾರ್ಡ್ ಪೊಲೀಸರು ಸ್ಥಳಕ್ಕೆ ಧಾವಿಸಿ, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅದಲ್ಲದೇ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. 

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ