ಬಿಜೆಪಿ ವಿರುದ್ಧ ಬೀದಿಗಿಳಿದ ಕಾಂಗ್ರೆಸ್

Congress protest against BJP

28-11-2017

ಧಾರವಾಡ: ಯೋಗೀಶ್ ಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಚಿವ ವಿನಯ ಕುಲಕರ್ಣಿ ವಿರುದ್ಧ ಬಿಜೆಪಿ ಷಡ್ಯಂತ್ರ ಮಾಡುತ್ತಿದ್ದು, ಸಚಿವ ‌ವಿನಯ ಕುಲಕರ್ಣಿ ತೇಜೋವಧೆಗೆ ಯತ್ನಿಸುತ್ತಿದೆ ಎಂದು ಆರೋಪಿಸಿ, ಬಿಜೆಪಿ‌ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದೆ.

ಧಾರವಾಡದಲ್ಲಿನ ಪ್ರತಿಭಟನಾ ಮೆರವಣಿಯಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದು, ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರವಾಡದ ಟೌನ್ ಹಾಲ್ ನಿಂದ ‌ಡಿಸಿ‌ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ್ದು, ಬಿಜೆಪಿ ನಾಯಕರ‌ ವಿರುದ್ಧ ಧಿಕ್ಕಾರ ಹಾಕಿದ್ದಾರೆ, ನಿನ್ನೆ ಸಚಿವ ವಿನಯ ಕುಲಕರ್ಣಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸಿತ್ತು, ಇಂದು ಬಿಜೆಪಿಗೆ‌ ತಿರುಗೇಟು ನೀಡೋಕೆ ಪ್ರತಿಯಾಗಿ ಪ್ರತಿಭಟನೆ ನಡೆಸಿದ್ದಾರೆ ಎನ್ನಲಾಗಿದೆ. ಪ್ರತಿಭಟನೆಯಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ, ಎಂಎಲ್ಸಿ‌ ಶ್ರೀನಿವಾಸ್ ಮಾನೆ‌ ಸೇರಿ ಹಲವು ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ