'ದಿನೇ ದಿನೇ ಮೋದಿ ಹವಾ ಕಡಿಮೆ ಆಗ್ತಿದೆ’

Day by day decreasing modi hava

29-11-2017

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ "ಹವಾ" ದಿನೇ ದಿನೇ ಕಡಿಮೆ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮೈಸೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೋದಿ ಅವರ ಹವಾ ಕಡಿಮೆ ಆಗುತ್ತಿದೆ ಎಂಬುದರಲ್ಲಿ ಎರಡನೇ ಮಾತೇ ಇಲ್ಲ ಎಂದರು.

ಚುನಾವಣೆಗೂ ಮುನ್ನ ಮೋದಿ ಅವರು ಜನರನ್ನು ಭಾವನಾತ್ಮಕವಾಗಿ ಎತ್ತಿ ಕಟ್ಟಿದ್ದರು. ಜೊತೆಗೆ ಚುನಾವಣಾ ಪೂರ್ವದಲ್ಲಿ ಜನರಿಗೆ ಅವರು ನೀಡಿದ್ದ ಭರವಸೆಗಳೂ ಹುಸಿಯಾಗಿದೆ ಎಂದರು. ಗುಜರಾತ್ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಪಾಲಿಗೆ ಆಶಾದಾಯಕವಾಗಿದೆ, ಪಟೇಲ್ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಇರುವ ಪ್ರದೇಶಗಳಲ್ಲಿ ಬಿಜೆಪಿಗೆ ಭಾರಿ ವಿರೋಧ ವ್ಯಕ್ತವಾಗುತ್ತಿದೆ, ಪ್ರಧಾನಿ ನರೇಂದ್ರ ಮೋದಿ ಅವರ ಬಹಿರಂಗ ಸಭೆಗಳಿಗೂ ಜನ ಸೇರುತ್ತಿಲ್ಲ, ಇದು ಬಿಜೆಪಿಗೆ ಭಾರಿ ಹಿನ್ನೆಡೆ ಉಂಟು ಮಾಡಿದೆ ಎಂದು ಹೇಳಿದರು.

ಇನ್ನು ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ 20 ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪಲಿದೆ ಎಂಬುದು ಊಹಾಪೋಹ ಎಂದು ಸ್ಪಷ್ಟಪಡಿಸಿದ್ದಾರೆ. ಸ್ಥಳೀಯ ಕಾರ್ಯಕರ್ತರು, ಮುಖಂಡರು, ಬ್ಲಾಕ್ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿ ಅಭಿಪ್ರಾಯ ಆಧರಿಸಿ ಟಿಕೆಟ್ ನೀಡಲಾಗುವುದು ಎಂದು ತಿಳಿಸಿದರು. ಅಲ್ಲದೇ ಮಾಜಿ ಸಚಿವ ವಿಜಯ ಶಂಕರ್ ಅವರು ಕಾಂಗ್ರೆಸ್ ಸೇರುವುದಾದರೆ ಸ್ವಾಗತ ಮಾಡುತ್ತೇನೆ ಎಂದು ಮುಖ್ಯಮಂತ್ರಿಯವರು ಹೇಳಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ