ಕುಖ್ಯಾತ ಕಳ್ಳನ ಬಂಧನ

Notorious Thief Arrested

30-11-2017

ನೆಲಮಂಗಲ: ನೆಲಮಂಗಲದ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ, ಕುಖ್ಯಾತ ಮನೆಗಳ್ಳನೊಬ್ಬನನ್ನು ಬಂಧಿಸಿದ್ದಾರೆ. ಕುದೂರು ಮೂಲದ ಗಿರೀಶ್(35) ಬಂಧಿತ ಆರೋಪಿ. ಈತನಿಂದ ಬರೋಬ್ಬರಿ 18 ಲಕ್ಷ ಮೌಲ್ಯದ 550 ಗ್ರಾಂ. ಚಿನ್ನಾಭರಣ ಹಾಗೂ ಒಂದು ಕೆಜಿ ಬೆಳ್ಳಿ ವಶಪಡಿಸಿಕೊಂಡಿದ್ದಾರೆ. ಒಂಟಿ ಮನೆ ಹಾಗೂ ಒಂಟಿ ಮಹಿಳೆಯರನ್ನೇ ಈತ ಟಾರ್ಗೆಟ್ ಮಾಡುತ್ತಿದ್ದು, ಹಲವಾರು ಕಡೆ ಕಳ್ಳತನ ನಡೆಸಿದ್ದಾನೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಳ್ಳನನ್ನು ಬಲೆಗೆ ಕೆಡವಿದ್ದಾರೆ. ಇನ್ನು ಕೃತ್ಯಕ್ಕೆ ಬಳಸುತ್ತಿದ್ದ ಎರಡು ಬೈಕ್ ಗಳನ್ನು ವಶಕ್ಕೆ ಪಡೆದಿದ್ದು, ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Nelamangala Police station ಬರೋಬ್ಬರಿ ಟಾರ್ಗೆಟ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ