ಪೇಜಾವರ ಶ್ರೀಗಳ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

Students

30-11-2017

ಬೆಂಗಳೂರು: ಸಂವಿಧಾನವನ್ನು ಬದಲಾವಣೆ ಮಾಡಬೇಕು ಎಂದಿದ್ದ ಪೇಜಾವರ ಶ್ರೀಗಳ ಹೇಳಿಕೆಗೆ, ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದಲ್ಲದೇ ಹನುಮ ಜಯಂತಿ ಮತ್ತು ಗುರುವಂದನಾ ಕಾರ್ಯಕ್ರಮ ಆಗಮನಕ್ಕೆ ಹಾಕಿದ್ದ ಫ್ಲೆಕ್ಸ್ ಮತ್ತು ಬ್ಯಾನರ್ ಗಳನ್ನು ಕಿತ್ತು ಹಾಕಿದ್ದು, ಶ್ರೀಗಳ ವಿರುದ್ಧ ತಮ್ಮ ಅಸಮಧಾನ ಹೊರಹಾಕಿದ್ದಾರೆ. ವಿದ್ಯಾರ್ಥಿಗಳ ಭಾರೀ ಒತ್ತಾಯಕ್ಕೆ ಮಣಿದು ಪೊಲೀಸರು ಸಹ ತೆರವುಕಾರ್ಯ ನಡೆಸಿದರು. ಇದರಿಂದ ಬೆಂಗಳೂರು ವಿಶ್ವವಿದ್ಯಾಲಯದ ಸುತ್ತ ಮುತ್ತ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ