ಅಪಘಾತ: ವೊಲ್ವೋ ಬಸ್ ಚಾಲಕ ಸಾವು

Accident: Volvo bus driver died

30-11-2017

ಬೆಂಗಳೂರು: ಚಿಕ್ಕಬಳ್ಳಾಪುರದ ರಾಷ್ಟ್ರೀಯ ಹೆದ್ದಾರಿ 7ರ ಆರೂರು ಬಳಿ, ಬೆಳಿಗ್ಗೆ ದಟ್ಟ ಮಂಜು ಆವರಿಸಿ ಕತ್ತಲಲ್ಲಿ ಸರಿಯಾಗಿ ಕಾಣದೇ ಕೆಟ್ಟು ನಿಂತಿದ್ದ ಕ್ಯಾಂಟರ್ ಗೆ ಹಿಂದಿನಿಂದ ವೇಗವಾಗಿ ಬಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‍ಆರ್‍ಟಿಸಿ)ವೋಲ್ವೋ ಬಸ್ ಡಿಕ್ಕಿ ಹೊಡೆದು ಬಸ್ ಚಾಲಕ ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ.

ಮೃತ ಕೆಎಸ್‍ಆರ್‍ಟಿಸಿ ಬಸ್ ಚಾಲಕನನ್ನು ಕಲ್ಲಪ್ಪ(45) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ನಾಲ್ವರನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನಿಂದ ಹೈದರಾಬಾದ್‍ಗೆ ಹೋಗುತ್ತಿದ್ದ ವೋಲ್ವೋ ಬಸ್ ಮಾರ್ಗ ಮಧ್ಯೆ ದಟ್ಟ ಮಂಜು ಆವರಿಸಿದ್ದು ಸರಿಯಾಗಿ ದಾರಿ ಕಾಣದೆ ಆರೂರು ಬಳಿ ನಿಂತಿದ್ದ ಕ್ಯಾಂಟರ್ ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ