ವಿಜಯಪುರದಲ್ಲಿ ಬಿಜೆಪಿ ಭಿನ್ನಮತ ಸ್ಪೋಟ

Yeddyurappa warns Vijayapura bjp

30-11-2017

ವಿಜಯಪುರ: ವಿಜಯಪುರ ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಿನ್ನಮತ ಬಹಿರಂಗ ಗೊಂಡಿದೆ.

ವಿಯಪುರ ಬಿಜೆಪಿ ಯಾತ್ರೆಯಲ್ಲಿ, ಇಲ್ಲಿ ಯಾರ ಪರವಾಗಿಯೂ ಪ್ರಚಾರಕ್ಕೆ ನಾನು ಬಂದಿಲ್ಲ, ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಾಗದಿದ್ದರೇ ಕಾರ್ಯಕ್ರಮ ರದ್ದುಪಡಿಸುವೆ ಎಂದು, ಬಿಜೆಪಿ ರಾಜ್ಯಾಧ್ಯಕ್ಷ ಎಚ್ಚರಿಕೆ ನೀಡಿದ್ದಾರೆ. ಪ್ರಾಸ್ತಾವಿಕ ಭಾಷಣದಲ್ಲಿ ಮಾಜಿ ಸಚಿವ ಸಂಗಣ್ಣ ಕೆ. ಬೆಳ್ಳುಬ್ಬಿ ಹೆಸರು ಹೇಳದಿದ್ದು, ಆಗ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಸಂಗರಾಜ ದೇಸಾಯಿ ಆಕ್ಷೇಪಿಸಿದ್ದಾರೆ. ಆಗ ಮಧ್ಯಪ್ರವೇಶಿ ಎಚ್ಚರಿಕೆ ನೀಡಿದ ಯಡಿಯೂರಪ್ಪ ಅವರು, ಪ್ರಾಸ್ತಾವಿಕ ಭಾಷಣದಲ್ಲಿ ಕಾರ್ಯಕರ್ತರನ್ನು ತರಾಟೆಗೆ ತೆಗೆದುಕೊಂಡರು. ನಂತರ ಬೆಳ್ಳುಬ್ಬಿ ಯಡಿಯೂರಪ್ಪ ಅವರ ಕ್ಷಮೆ ಕೇಳಿದರು.


ಸಂಬಂಧಿತ ಟ್ಯಾಗ್ಗಳು

vijayapura BSY ಭಿನ್ನಮತ ಮುಖಂಡರು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ