ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ

Abduct case file in gulbarga

30-11-2017

ಬೆಳಗಾವಿ: ಶಾಲೆಗೆ ಹೋದ ಬಾಲಕಿಯರು ನಾಪತ್ತೆಯಾಗಿರುವ ಘಟನೆಯು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಬೋರಗಾಂವ್ ಗ್ರಾಮದಲ್ಲಿ ನಡೆದಿದೆ. ಪ್ರೌಢ ಶಾಲಾ ವಿದ್ಯಾರ್ಥಿನಿಯರಾದ ಶಾಲು ಮಿಶ್ರಾ (15) ಆರತಿ ಪಾಟೀಲ್ (15) ನಾಪತ್ತೆಯಾದ ಬಾಲಕಿಯರು. ಬೋರಗಾಂವ್ ಗ್ರಾಮದ ಖಾಸಗಿ ಶಾಲೆಯಲ್ಲಿ 9 ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿಯರು, ನಿನ್ನೆ ಮುಂಜಾನೆ ಶಾಲೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದು, ಇಲ್ಲಿಯವರೆಗೂ ಮನೆಗೆ ಬಂದಿಲ್ಲ. ಇದರಿಂದ ಆತಂಕಗೊಂಡ ಪೋಷಕರು ಸದಲಗಾ ಪೊಲೀಸ್ ಠಾಣೆಗೆ ಅಪಹರಣ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬಾಲಕಿಯರಿಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Abduct school children ನಾಪತ್ತೆ ವಿದ್ಯಾರ್ಥಿನಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ