ವ್ಯಕ್ತಿ ಅನುಮಾನಾಸ್ಪದ ಸಾವು

suspicious death..?

01-12-2017

ಯಾದಗಿರಿ: ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಘಟನೆಯು ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ತುಮಕೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸುಮಾರು(30) ವಯಸ್ಸಿನ ಯುವಕನ ಶವ ಪತ್ತೆಯಾಗಿದೆ. ವ್ಯಕ್ತಿಯ ಹೆಸರು, ವಿಳಾಸ ತಿಳಿದು ಬಂದಿಲ್ಲ, ಸ್ಥಳೀಯರು ನೀಡಿದ ಮಾಹಿತಿಯನ್ನಾಧರಿಸಿ, ಸ್ಥಳಕ್ಕೆ ಧಾವಿಸಿದ ಪೊಲೀಸರು, ಪರಿಶೀಲನೆ ನಡೆಸಿ, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

suspected death yadagir ಶಹಾಪುರ ತನಿಖೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ