ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ..!

congress rallies in karnataka

01-12-2017

ಬೆಂಗಳೂರು: ಮುಂಬರಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದೆ, ಸತತ 3 ಯಾತ್ರೆಗಳನ್ನು ಹಮ್ಮಿಕೊಂಡಿದ್ದು, ಡಿಸೆಂಬರ್ 15 ರಂದು, ಸಿಎಂ ಸಿದ್ದರಾಮಯ್ಯ ಅವರು, ಜನ ಆರ್ಶೀವಾದ ಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಇದು ಸರ್ಕಾರದ ಕಾರ್ಯಕ್ರಮವಾಗಿದ್ದು, ಸರ್ಕಾರ ಯೋಜನೆ ಜನರಿಗೆ ತಲುಪಿದ್ದೀಯಾ ಎಂದು ತಿಳಿಯಲು, ಖುದ್ದು ಸಿಎಂ ಜನರ ಬಳಿ ಅಹವಾಲು ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

ಇನ್ನು ಬಜೆಟ್ ನಂತರ ಕಾಂಗ್ರೆಸ್ ಪಕ್ಷದ ವತಿಯಿಂದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಸಂಪುಟದ ಬಹುತೇಕ ಸಚಿವರು  ರಾಜ್ಯ ಯಾತ್ರೆ ಮಾಡಲಿದ್ದಾರೆ. ಈ ವೇಳೆ ಕಾಂಗ್ರೆಸ್ 2012 ರಲ್ಲಿ ಚುನಾವಣಾ ಪ್ರಚಾರದ ವೇಳೆ ನೀಡಿದ್ದ ಪ್ರಣಾಳಿಕೆಯನ್ನು ತಪ್ಪದೇ ಪೂರೈಸಿದ್ದೀವಿ ಹಾಗೂ 2018 ರ ಹೊಸ ಚುನಾವಣಾ ಪ್ರಣಾಳಿಕೆಯನ್ನು ಜನರ ಮುಂದೆ ಇಡಲಿದ್ದಾರೆ ಎನ್ನಲಾಗಿದೆ.

ಇನ್ನು ಏಪ್ರಿಲ್ ಮೊದಲ ವಾರದಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸೇರಿದಂತೆ  ರಾಜ್ಯದ ಎಲ್ಲ ಕಾಂಗ್ರೆಸ್ ನಾಯಕರ ಚುನಾವಣಾ ಪ್ರಚಾರ ಯಾತ್ರೆಗೆ ಚಾಲನೆ ದೊರೆಯಲಿದೆ. ಕಾಂಗ್ರೆಸ್ ನ ಚುನಾವಣಾ ಪ್ರಚಾರ ಯಾತ್ರೆಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ