ಯಡಿಯೂರಪ್ಪ v/s ಎಂ.ಬಿ ಪಾಟೀಲ್

Yeddyurappa v / s MB Patil

01-12-2017

ವಿಜಯಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತಮ್ಮನ್ನು ಸಿದ್ದರಾಮಯ್ಯ ಸರ್ಕಾರದಲ್ಲಿ ಕಮಿಷನ್ ಏಜೆಂಟ್ ಎಂದು ಹೇಳಿಕೆ ನೀಡಿರುವ ಕುರಿತಂತೆ ಕಾನೂನು ಸಲಹೆಗಾರರೊಂದಿಗೆ ಸಮಾಲೋಚನೆ ನಡೆಸಿದ್ದು, ಅವರ ವಿರುದ್ಧ ಮೊಕದ್ದಮೆ ಹೂಡಲಾಗುವುದು, ಹಾಗೂ ಈ ಕುರಿತಂತೆ ಯಡಿಯೂರಪ್ಪನವರಿಗೆ ಶೀಘ್ರದಲ್ಲಿಯೇ ನೋಟಿಸ್ ನೀಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಡಾ.ಎಂ.ಬಿ.ಪಾಟೀಲ ತಿಳಿಸಿದ್ದಾರೆ.

ಈ ಕುರಿತಂತೆ ವಿಜಯಪುರದಲ್ಲಿಂದು ಪ್ರಕಟಣೆ ನೀಡಿರುವ ಅವರು, ಜಲಸಂಪನ್ಮೂಲ ಸಚಿವರು ಕಮಿಷನ್ ಏಜೆಂಟ್‍ರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಆರ್ಥಿಕ ಸಂಪನ್ಮೂಲ ಒದಗಿಸುತ್ತಿದ್ದಾರೆ ಎಂದು ಆರೋಪಿಸಿರುವ ಬಿ.ಎಸ್.ಯಡಿಯೂರಪ್ಪನವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತಂತೆ ಯಡಿಯೂರಪ್ಪನವರ ವಿರುದ್ಧ ಕೇಸ್ ದಾಖಲಿಸಲು ಸಿದ್ಧತೆಗಳನ್ನು ಮಾಡಲಾಗುತ್ತಿದೆ ಎಂದು ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಪರಿವರ್ತನಾ ಯಾತ್ರೆಯಲ್ಲಿ ಸತತವಾಗಿ ಕಾಂಗ್ರೆಸ್ ಸರ್ಕಾರ ಮತ್ತು ನನ್ನ ವಿರುದ್ಧ ಮಾಡುತ್ತಿರುವ ಎಲ್ಲ ಆರೋಪ ಟೀಕೆಗಳಿಗೆ ಮತ್ತು ನನ್ನ ಸ್ವ-ಕ್ಷೇತ್ರ ತಿಕೋಟಾದಲ್ಲಿ ನಡೆಸಲಿರುವ ಯಾತ್ರೆಯಲ್ಲಿ ಯಡಿಯೂರಪ್ಪನವರಿಗೆ ಪ್ರತ್ಯುತ್ತರವನ್ನು ನೀಡಲಿದ್ದೇನೆ ಎಂದು ಸಚಿವ ಪಾಟೀಲ ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

M.B patil Notice ಏಜೆಂಟ್‍ ಜಲಸಂಪನ್ಮೂಲ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ