ಕುಖ್ಯಾತ ಕಳ್ಳನಿಗೆ ಗುಂಡೇಟು...!

shootout on notorious thief

04-12-2017

ಕಲಬುರಗಿ: ಕಲಬುರಗಿಯಲ್ಲಿ ಕುಖ್ಯಾತ ದರೋಡೆಕೋರನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಅಫಜಲಪುರ ತಾಲ್ಲೂಕಿನ ಗೊಬ್ಬುರ ಬಳಿ ದರೋಡೆಕೋರ ನಾಗಪ್ಪ (30) ಎಂಬ ವ್ಯಕ್ತಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ನಾಗಪ್ಪನು, ದರೋಡೆ, ಅಕ್ರಮ ಶಸ್ತಾಸ್ತ್ರ, ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದು, ಗುಂಡೇಟಿನಿಂದ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ ಮೂರು ಕಂಟ್ರಿಮೇಡ್ ಪಿಸ್ತೂಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈತನ ಬಂಧನಕ್ಕೆ ಎಎಸ್ಪಿ ಲೊಕೇಶ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿತ್ತು. ಇಂದು ಬೆಳಗಿನ ಜಾವ ಗೊಬ್ಬುರ ಬಳಿ ಬಂಧನಕ್ಕೆ ತೆರಳಿದ್ದಾಗ ಪೊಲೀಸರ ಮೇಲೆಯೇ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ್ದು, ಈ ವೇಳೆ ತಮ್ಮ ರಕ್ಷಣೆಗಾಗಿ ಫೈರಿಂಗ್ ನೆಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಮಹಾಗಾಂ ಪಿಎಸ್‌ಐ ಪ್ರದೀಪ್, ಎಎಸ್‌ಐ ಶಿವಪ್ಪ ಅವರಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Firing Gun ಎಎಸ್ಪಿ ಪಿಎಸ್‌ಐ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ