ಪ್ರತಾಪಸಿಂಹ ವಿರುದ್ಧ ಕಾಂಗ್ರೆಸ್ ಆಕ್ರೋಶ

Pratap Simha vs Congress outrage

04-12-2017

ಬೆಂಗಳೂರು: ಪೋಲೀಸ್ ಅಧಿಕಾರಿಗಳಿಗೆ ಅನುಚಿತ ವರ್ತನೆ ತೋರಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ನಗರದ ಗಾಂಧಿ ಪ್ರತಿಮೆ ಬಳಿ ಯುವ  ಕಾಂಗ್ರೆಸ್ ಕಾರ್ಯಕರ್ತರು, ಪ್ರತಿಭಟನೆ ನಡೆಸಿದ್ದಾರೆ. ಹನುಮ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಬಿಳಿಕೆರೆ ಗ್ರಾಮಕ್ಕೆ ಆಗಮಿಸುತ್ತಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಈ ವೇಳೆ  ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಮೇಲೆ ಕಾರು ಹತ್ತಿಸಿ, ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಭಾರೀ ಪ್ರತಿಭಟನೆ ನಡೆಸಿದ್ದಾರೆ. ನಿಷೇಧದ ಮಧ್ಯೆಯೂ ಹನುಮಾನ ಮೆರವಣಿಗೆ ನಡೆಸಿಯೇ ತಿರುತ್ತೇವೆ ಎನ್ನುವ ಹಟದಿಂದ ಪ್ರತಾಪ್ ಸಿಂಹ ಈ ರೀತಿ ನಡೆದುಕೊಂಡಿದ್ದು, ಕಾಂಗ್ರೆಸ್ ಕಾರ್ಯಕರ್ತರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ರೌಡಿ ಸಂಸದ ಪ್ರತಾಪ್ ಸಿಂಹ ಎಂಬ ಘೋಷಣೆಗಳನ್ನು ಕೂಗಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Pratap Simha Youth Congress ರೌಡಿ ಮೆರವಣಿಗೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ