ಬಳ್ಳಾರಿ ಜಿ.ಪಂ ಅಧ್ಯಕ್ಷೆ ಸ್ಥಾನ ಅಸಿಂಧು

high court orders: invalid zp chair

04-12-2017

ಬಳ್ಳಾರಿ: ಬಳ್ಳಾರಿ ಜಿಲ್ಲಾ ಪಂಚಾಯತಿ ಅಧ್ಯಕ್ಷೆಯಾಗಿದ್ದ ಭಾರತಿ ತಿಮ್ಮಾರೆಡ್ಡಿ ಅವರ ಸ್ಥಾನವನ್ನು ಅಸಿಂಧುಗೊಳಿಸಿ ಧಾರವಾಡದ ಹೈಕೋರ್ಟ್ ನ ವಿಭಾಗೀಯ ಪೀಠ ಆದೇಶ ನೀಡಿದೆ. ಭಾರತಿ ತಿಮ್ಮಾರೆಡ್ಡಿ ಅವರು, ಸುಳ್ಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಿ ಅಧ್ಯಕ್ಷೆ ಸ್ಥಾನವನ್ನು ಗಿಟ್ಟಿಸಿಕೊಂಡ ಹಿನ್ನೆಲೆ ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶವನ್ನು ನೀಡಿದೆ. ಅಧ್ಯಕ್ಷ ಸ್ಥಾನಕ್ಕಾಗಿ ಮೀಸಲು ಪಡೆಯಲು ನಕಲಿ ಪ್ರಮಾಣ ಪತ್ರ ಸಲ್ಲಿಸಿದ್ದಾರೆಂದು ಆರೋಪಿಸಿ, ಸಿದ್ದಪ್ಪ ಮತ್ತಿತರರು ನ್ಯಾಯಾಲಯದ ಮೊರೆ ಹೋಗಿದ್ದರು, ಅದಲ್ಲದೇ ಪ್ರಕರಣ ಸುಪ್ರೀಂ ಕೋರ್ಟ್ ವರೆಗೆ ಹೋಗಿತ್ತು. ನಂತರದಲ್ಲಿ ವಿಚಾರಣೆ ನಡೆಸಿದ ಧಾರವಾಡದ ಹೈಕೋರ್ಟ್ ನ ವಿಭಾಗೀಯ ಏಕ ಸದಸ್ಯ ಪೀಠ, ಅಧ್ಯಕ್ಷೆ ಸ್ಥಾನ ಅಸಿಂಧುಗೊಳಿಸಿ ಆದೇಶವನ್ನು ಎತ್ತಿ ಹಿಡಿದಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ