ಬಿಸಿಯೂಟದಲ್ಲಿ ಹುಳುಗಳು ಗ್ರಾಮಸ್ಥರ ಆಕ್ರೋಶ

poor bisi oota villagers

04-12-2017

ಗದಗ: ಸರಕಾರಿ ಶಾಲೆಯಲ್ಲಿ ಕಳಪೆ ಮಟ್ಟದ ಬಿಸಿಯೂಟ ವಿತರಿಸಿದ್ದರಿಂದ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ಘಟನೆಯು, ಗದಗ ಜಿಲ್ಲೆ ರೋಣ ತಾಲ್ಲೂಕಿನ ಹುಲ್ಲೂರ ಗ್ರಾಮದಲ್ಲಿ ನಡೆದಿದೆ. ಹುಲ್ಲೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೀಡುತ್ತಿದ್ದ ಬಿಸಿಯೂಟದಲ್ಲಿ ಹುಳುಗಳು ಕಾಣಿಸಿಕೊಂಡಿದ್ದು, ಇದನ್ನು ನೋಡಿದ ಗ್ರಾಮಸ್ಥರು, ಮುಖ್ಯೊಪಾದ್ಯಾಯ ರಮಾಕಾಂತ ಕಮತಗಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.  ಅಧಿಕಾರಿಗಳು ಮಕ್ಕಳ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು, ಆರೋಪಿಸಿ  ಕಾಂಗ್ರೆಸ್ ಮುಖಂಡ ದಶರಥ ಗಾಣಿಗೇರಿ ಹಾಗೂ ಗ್ರಾಮಸ್ಥರು ಶಾಲೆಯ ಮುಖ್ಯೋಪಾದ್ಯಾಯ ಮತ್ತು ಸಿಬ್ಬಂದಿ, ವಿರುದ್ಧ ಶಾಲೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಶಾಲಾ ಸಿಬ್ಬಂದಿಗಳ ಬದಲಾವಣೆಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ