‘ಗುಜರಾತ್ ನಲ್ಲಿ ಬಿಜೆಪಿ ಗೆಲ್ಲಲಿದೆ’- ಬಿಎಸ್ ವೈ

BJP will win in Gujarat: BSY

04-12-2017

ಕಲಬುರಗಿ: ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯುಡಿಯೂರಪ್ಪ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಆಂಡ್ ಟೀಮ್ ರಾಜ್ಯದಲ್ಲಿ ಹಗಲು ದರೋಡೆಯಲ್ಲಿ ತೊಡಗಿದೆ, ರಾಜ್ಯದಲ್ಲಿ ನೀರಾವರಿ ಯೋಜನೆಗಳು ಅಪೂರ್ಣವಾಗಿವೆ ಎಂದು ಆರೋಪಿಸಿದ್ದಾರೆ.

ಇನ್ನು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷರಾದರೆ ಏನೂ ಬದಲಾವಣೆ ಆಗೋದಿಲ್ಲ ಎಂದಿದ್ದಾರೆ. ತಮ್ಮ ಮಾತನ್ನು ಮುಂದುವರೆಸಿದ ಬಿಎಸ್ ವೈ, ಹನುಮಜಯಂತಿ ವೇಳೆ ಸಂಸದ ಪ್ರತಾಪ್ ಸಿಂಹ ಅವರನ್ನು, ಬಂಧಿಸಿದ ಕ್ರಮಕ್ಕೆ ಸಿಎಂಗೆ ನಾಚಿಕೆಯಾಗಬೇಕು, ಜನರ ಜೀವನದ ಜತೆ ಸಿಎಂ ಚೆಲ್ಲಾಟ ಆಡುತ್ತಿದ್ದಾರೆ, ಮೂರು ತಿಂಗಳಲ್ಲಿ ಸಿಎಂ ಮನೆಗೆ ಹೋಗಲಿದ್ದಾರೆ ಎಂದರು.


ಸಂಬಂಧಿತ ಟ್ಯಾಗ್ಗಳು

B.S.Yeddyurappa AICC Rahul Gandhi Prathap simha


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ