ನ್ಯಾಯಾಧೀಶರ ಮನೆಯಲ್ಲಿ ಕಳ್ಳತನಕ್ಕೆ ಯತ್ನ

Attempt to steal the judge

05-12-2017 246

ತುಮಕೂರು: ನ್ಯಾಯಾಧೀಶರೊಬ್ಬರ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ್ದು, ಈ ವೇಳೆ ನ್ಯಾಯಾಧೀಶರನ್ನು ಕಂಡು ಕಳ್ಳರು ಪರಾರಿಯಾಗಿದ್ದಾರೆ. ತುಮಕೂರಿನ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ, ಕಟ್ಟಿಮನೆ ಅವರ ನಿವಾಸದಲ್ಲಿ ಈ ಘಟನೆ ನಡೆದಿದೆ. ತುಮಕೂರು ನಗರದ ಶಿರಾ ಗೇಟ್ ಬಳಿ ನ್ಯಾಯಾಧೀಶರ ನಿವಾಸ‌ವಿದೆ. ಕಳ್ಳತನಕ್ಕೆಂದು ಬಂದವರು, ನ್ಯಾಯಧೀಶರ ಮನೆಬಾಗಿಲು‌ ಮುರಿದು ಒಳಗಡೆ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ನ್ಯಾಯಾಧೀಶರನ್ನು ಕಂಡು ಪರಾರಿಯಾಗಿದ್ದಾರೆ. ಡಿಸಿ ಹಾಗೂ ಎಸ್ಪಿ ಮನೆ ಪಕ್ಕದಲ್ಲೇ ನ್ಯಾಯಾಧೀಶರ ನಿವಾಸವಿದೆ. ಇನ್ನು ಘಟನೆ ತಿಳಿದು ಸ್ಥಳಕ್ಕೆ ಎಸ್.ಪಿ. ಡಾ.ದಿವ್ಯಾಗೋಪಿನಾಥ್  ಭೇಟಿ ಪರಿಶೀಲನೆ ನಡೆಸಿದ್ದಾರೆ. ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.ಸಂಬಂಧಿತ ಟ್ಯಾಗ್ಗಳು

justices Robbery ನ್ಯಾಯಾಧೀಶ ಕಳ್ಳತನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ