ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳನ್ನು ನಿಷೇಧಿಸಲು ಆಗ್ರಹಿಸಿ ಪ್ರತಿಭಟನೆ

Kannada News

11-04-2017

ಬೆಂಗಳೂರು, ಏ.11: ಪ್ರಜಾಪ್ರಭುತ್ವಕ್ಕೆ ಮಾರಕವಾಗಿರುವ ವಿದ್ಯುನ್ಮಾನ ಮತಯಂತ್ರ (ಇವಿಎಂ)ಗಳನ್ನು ನಿಷೇಧಿಸಲು ಆಗ್ರಹಿಸಿ ಬಿಎಸ್‍ಪಿ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.ಆನಂದರಾವ್ ವೃತ್ತದಲ್ಲಿರುವ ಗಾಂಧಿಪ್ರತಿಮೆ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಬಿಎಸ್‍ಪಿ ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ಇವಿಎಂಗಳನ್ನು ಟ್ಯಾಂಪರ್ ಮಾಡಿ ಉತ್ತರ ಪ್ರದೇಶ, ಉತ್ತರಾಖಂಡ್‍ನಲ್ಲಿ ಬಿಎಸ್‍ಪಿಯನ್ನು ಸೋಲಿಸುವ ಮೂಲಕ ದೇಶದ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಿರುವ ಬಿಜೆಪಿಯ ಅಕ್ರಮ ಗೆಲುವನ್ನು ಪ್ರತಿಭಟಿಸಬೇಕಾಗಿದೆ. ಆರ್‍ಎಸ್‍ಎಸ್ ತನ್ನ ರಿಮೋಟ್‍ನಿಂದ ಬಿಜೆಪಿಯ ಮೂಲಕ ತನ್ನ ಕಾರ್ಯಸೂಚಿಯನ್ನು ಜಾರಿಗೊಳಿಸಲು ಮುಂದಾಗಿದೆ. ಕಪ್ಪು ಹಣ ಬಡವರಿಗೆ ಹಂಚು ಆಸೆ ಇಟ್ಟು 2019ರ ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ತಂತ್ರಗಾರಿಕೆ ಪ್ರಾರಂಭಿಸಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಆಳ್ವಿಕೆಯಿಂದ ಅಲ್ಲಿನ ಜನರಿಗೆ ಉಸಿರು ಕಟ್ಟಿಸುವ ವಾತಾವರಣ ನಿರ್ಮಾಣವಾಗಿದೆ ಎಂದು ಆರೋಪಿಸಿದರು.ಪ್ರಜಾಪ್ರಭುತ್ವಕ್ಕೆ ಮಾರಕವಾಗಿರುವ ಇವಿಎಂ ತಿದ್ದುವ ಮೂಲಕ ಗೆದ್ದಿರುವ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಬೇಕಾಗಿದೆ. ಈ ಬಗ್ಗೆ ಬಿಎಸ್‍ಪಿನ್ಯಾಯಾಲಯದಲ್ಲಿ ಹೋರಾಟ ನಡೆಸಲಿದೆ. ಈ ಬಗ್ಗೆ ದೇಶದ ಜನರಿಗೆ ತಿಳಿಸಲು ಉತ್ತರ ಪ್ರದೇಶ ಚುನಾವಣಾ ಫಲಿತಾಂಶದ ಹಿನ್ನೆಲೆ ದಿನದಿಂದ ಒಂದು ತಿಂಗಳ ಕಾಲ ರಾಷ್ಟ್ರಾದ್ಯಂತ ಪ್ರತಿಭಟನಾ ಧರಣಿ ನಡೆಸಲಾಗುತ್ತದೆ ಎಂದು ಹೇಳಿದರು.ಪ್ರತಿಭಟನೆಯಲ್ಲಿ ರಾಜ್ಯ ಉಪಾಧ್ಯಕ್ಷ ಸೈಯಲ್ ಝುಲ್ಫಿಕರ್ ಹಾಶ್ಮಿ, ರಾಜೀವ್ ಕಾಂಬ್ಳೆ, ಧರ್ಮಣ್ಣ, ಮತ್ತಿತರರು ಭಾಗವಹಿಸಿದ್ದರು.

Links :
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ