ಕೊಲೆಯೋ-ಅಪಘಾತವೋ..?

Murder or accident?

05-12-2017

ಚಿತ್ರದುರ್ಗ: ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆಯು,  ಚಿತ್ರದುರ್ಗ ಜಿಲ್ಲೆಯ ಹುಲ್ಲೂರು ತಾಲ್ಲೂಕಿನ ನಾಯಕರಹಟ್ಟಿ ಬಳಿ ನಡೆದಿದೆ. ನಿನ್ನೆ ತಡರಾತ್ರಿಯಲ್ಲಿ ಕೊಲೆ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಹುಲ್ಲೂರಿನ ನಾಯಕರಹಟ್ಟಿ ಬಳಿ ವ್ಯಕ್ತಿಯ ಶವಪತ್ತೆಯಾಗಿದ್ದು, ನಾಯಕರಹಟ್ಟಿಯ ಮಹೆಬೂಬ್ ಪಾಷಾ(30) ಎಂದು ಮೃತ ವ್ಯಕ್ತಿಯನ್ನು ಗುರುತಿಸಲಾಗಿದೆ. ಇನ್ನು ಸಾವಿನ ಬಗ್ಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ಅಪಘಾತದಿಂದ ಸಾವನ್ನಪ್ಪಿರುವ ಬಗ್ಗೆ ಸ್ಥಳೀಯರ ಹೇಳಿಕೆ ನೀಡಿದ್ದು, ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Chitradurga Mysterious death ಅನುಮಾನಾಸ್ಪದ ನಿಖರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ