ಸ್ಮಶಾನದಲ್ಲಿ ವಿಶೇಷ ಕಾರ್ಯಕ್ರಮ

programmes in cemetery

06-12-2017

ಬೆಳಗಾವಿ: ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನವಾದ ಇಂದು, ಪರಿನಿರ್ವಾಣ ದಿನವನ್ನು ಮೌಢ್ಯ ವಿರೋಧಿ ಸಂಕಲ್ಪ ದಿನವನ್ನಾಗಿ ಆಚರಣೆ ಮಾಡುವಂತೆ, ಬೆಳಗಾವಿಯ ಸದಾಶಿವ ನಗರದ ಸ್ಮಶಾನದಲ್ಲಿ ವಿಷೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನವ ಬಂಧುತ್ವ ವೇದಿಕೆಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಶಾಸಕ ಸತೀಶ ಜಾರಿಕಿಹೊಳಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಸ್ಮಶಾನದಲ್ಲಿ ನಿರಂತರ 24 ಗಂಟೆಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಈ ವಿಶೇಷ ಕಾರ್ಯಕ್ರದಲ್ಲಿ ಬಹುಭಾಷ ನಟ ಪ್ರಕಾಶ್ ರೈ, ಶಾಸಕರಾದ ವೈ.ಎಸ್.ವಿ ದತ್ತಾ, ಕೆ‌.ಎಸ್.ಪುಟ್ಟಣ್ಣಯ್ಯ ಸೇರಿ ವಿವಿಧ ಮಠಾದೀಶರು ಭಾಗಿಯಾಗಲಿದ್ದಾರೆ ಮತ್ತು ರಾತ್ರಿ ಸತೀಶ್ ಜಾರಕಿಹೊಳಿ ಸ್ಮಶಾನದಲ್ಲೇ ವಾಸ್ತವ್ಯ ಹೂಡಲಿದ್ದಾರೆ ಎಂದು ತಿಳಿದು ಬಂದಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ