ಬೆಂಕಿಯಲ್ಲಿ ಬೆಂದ ದಂಪತಿ

couple committed suicide

06-12-2017

ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹ ಹಿನ್ನೆಲೆ ಗಂಡ ಮತ್ತು ಹೆಂಡತಿ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ರೂಪ ಮತ್ತು ಪತಿ ಮಹೇಶಾಚಾರಿ ಮೃತ ದಂಪತಿಗಳು. ಇವರು ಗುಡಿಬಂಡೆ ತಾಲ್ಲೂಕಿನ ಬೀಚಗಾನಹಳ್ಳಿಯ ನಿವಾಸಿಗಳು ಎಂದು ತಿಳಿದು ಬಂದಿದೆ. ನಿನ್ನೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಯತ್ನಿಸಿದ್ದರು, ಸುಟ್ಟಗಾಯಗಳಿಂದ ನರಳುತ್ತಿದ್ದ ಇವರನ್ನು ಕೂಡಲೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಶೇ 90% ಸುಟ್ಟ ಗಾಯಗಳಾಗಿದ್ದು, ಬದುಕುಳಿಯುವುದು ಸಾಧ್ಯವಾಗಲಿಲ್ಲ. ಗುಡಿಬಂಡೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Suicide fire ಆತ್ಮಹತ್ಯೆ ಕಲಹ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ