‘ಹುಣಸೂರು ರಸ್ತೆ ಏನು ಪಾಕಿಸ್ತಾನದಲ್ಲಿದೆಯೇ’07-12-2017 643

ಶಿವಮೊಗ್ಗ: ಕಾಂಗ್ರೆಸ್ ನಾಯಕರು ಹಿಂದು ಧರ್ಮಕ್ಕೆ ಅಪಮಾನವಾಗುವಂತೆ ನಡೆದುಕೊಳ್ಳುತ್ತಿದ್ದಾರೆ ಎಂದು, ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿಂದು ಮಾತನಾಡಿದ ಅವರು, ಮುಸಲ್ಮಾನರ ಬಗ್ಗೆ ನಮಗೆ ದ್ವೇಷವಿಲ್ಲ. ಮೊನ್ನೆ ಈದ್-ಮಿಲಾದ್ ವೇಳೆ ಪ್ರತಿ ರಸ್ತೆಯಲ್ಲಿ ಮೆರವಣಿಗೆ ನಡೆಸಿದರು. ಆದರೆ ಹುಣಸೂರಿನಲ್ಲಿ ಹಿಂದುಗಳ ಮೆರವಣಿಗೆಗೆ ಕೆಲ ರಸ್ತೆಗಳಲ್ಲಿ ನಿರ್ಬಂಧ ಹೇರಲಾಗಿತ್ತು. ಕೆಲ ರಸ್ತೆಗಳಲ್ಲಿ ಹಿಂದುಗಳಿಗೆ ನಿರ್ಬಂಧ ಹೇರುತ್ತಾರೆ ಎಂದರೆ ಆ ರಸ್ತೆ ಏನು ಪಾಕಿಸ್ತಾನದಲ್ಲಿದೆಯೇ ಎಂದು ಕಿಡಿಕಾರಿದ್ದಾರೆ.

ಹಿಂದುಗಳಿಗೆ ಅಪಮಾನ ಮಾಡಿದ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ರಾಜ್ಯದ ಜನರ ಕ್ಷಮೆ ಯಾಚಿಸಬೇಕು, ಅಭಿವೃದ್ಧಿ ಕಾರ್ಯದ ಆಧಾರದ ಮೇಲೆ ಚುನಾವಣೆಗೆ ಹೋಗಬೇಕು, ಅದನ್ನು ಬಿಟ್ಟು ಒಂದು ಕೋಮನ್ನು ಓಲೈಸಿ ಚುನಾವಣೆಗೆ ಕಾಂಗ್ರೆಸಿಗರು ಹೋದರೆ ಜನರೇ ತಕ್ಕಪಾಠ ಕಲಿಸುತ್ತಾರೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಬಗ್ಗೆ ನಮ್ಮ ಬಳಿ ಸಂಪೂರ್ಣ ಮಾಹಿತಿ ಇದೆ ಎನ್ನುತ್ತಿದ್ದಾರೆ, ಹಾಗಿದ್ದರೆ ಕೂಡಲೇ ಅದನ್ನು ಬಿಡುಗಡೆಗೊಳಿಸಿ ಎಂದು ಆಗ್ರಹಿಸಿದ ಅವರು, ಈ ವಿಷಯವನ್ನೂ ಚುನಾವಣಾ ದಾಳವಾಗಿ ಬಳಸಲು ಮುಖ್ಯಮಂತ್ರಿ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ಹಿಂದು ಮತ್ತು ಮುಸ್ಲಿಮರನ್ನು ದ್ವೇಷದಲ್ಲಿಟ್ಟು ಮುಖ್ಯಮಂತ್ರಿಯಾಗುವ ಕನಸನ್ನು ಸಿದ್ದರಾಮಯ್ಯ ಕಾಣುತ್ತಿದ್ದಾರೆ ಎಂದರು.

ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ, ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿಸಲಿದ್ದಾರೆ. ರಾಜ್ಯ ಸರ್ಕಾರ ಕೊಲೆಗಡುಕರು, ಗೋ ಹಂತಕರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳುತ್ತಿಲ್ಲ. ಬದಲಿಗೆ ಬಿಜೆಪಿ ಕಾರ್ಯಕರ್ತರ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಹೇಳುತ್ತಿದ್ದಾರೆ ಎಂದುರು.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ